ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ: ಕೃಷ್ಣಮೃಗ ಬೇಟೆಗಾರರ ಸೆರೆ
ಕೊಪ್ಪಳ: ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೃಷ್ಣಮೃಗ ಬೇಟೆಗಾರರನ್ನು ಬಂಧಿಸಿದ್ದಾರೆ. ಯಲಬುರ್ಗಾ ತಾಲೂಕಿನ ಹುಣಸಿಹಾಳ ತಾಂಡಾ ನಿವಾಸಿಗಳಾದ 6 ಬೇಟೆಗಾರರನ್ನು ಬಂಧಿಸಲಾಗಿದೆ. ಬಂಧಿತರಿಂದ 20 ಕೃಷ್ಣಮೃಗ ಚರ್ಮ, 2 ಕೃಷ್ಣಮೃಗ ಟ್ರೋಫಿಯುಳ್ಳ ಕೊಂಬು, ಒಂದು ಜಿಂಕೆ ಮರಿ, ದಂಧೆಗೆ ಬಳಸುತ್ತಿದ್ದ ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ. ತುಗ್ಲೆಪ್ಪ, ಶರಣಪ್ಪ ಚೌಹಾಣ, ಮಲ್ಲಯ್ಯ ಹಿರೇಮಠ, ಶಿವಯ್ಯ ಹಿರೇಮಠ, ಸಂಗಪ್ಪ ಕಟ್ಟಿಮನಿ, ಹನುಮಂತ ಕಟ್ಟಿಮನಿ ಬಂಧಿತ ಆರೋಪಿಗಳು. ಈ ಗ್ಯಾಂಗ್ ಯಲಬುರ್ಗಾ ಭಾಗದ ಅರಣ್ಯ ಪ್ರದೇಶಗಳಲ್ಲಿ ಕೃಷ್ಣ ಮೃಗಗಳ […]

ಕೊಪ್ಪಳ: ಅರಣ್ಯ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಕೃಷ್ಣಮೃಗ ಬೇಟೆಗಾರರನ್ನು ಬಂಧಿಸಿದ್ದಾರೆ. ಯಲಬುರ್ಗಾ ತಾಲೂಕಿನ ಹುಣಸಿಹಾಳ ತಾಂಡಾ ನಿವಾಸಿಗಳಾದ 6 ಬೇಟೆಗಾರರನ್ನು ಬಂಧಿಸಲಾಗಿದೆ. ಬಂಧಿತರಿಂದ 20 ಕೃಷ್ಣಮೃಗ ಚರ್ಮ, 2 ಕೃಷ್ಣಮೃಗ ಟ್ರೋಫಿಯುಳ್ಳ ಕೊಂಬು, ಒಂದು ಜಿಂಕೆ ಮರಿ, ದಂಧೆಗೆ ಬಳಸುತ್ತಿದ್ದ ಮೂರು ಬೈಕ್ ವಶಕ್ಕೆ ಪಡೆಯಲಾಗಿದೆ.
ತುಗ್ಲೆಪ್ಪ, ಶರಣಪ್ಪ ಚೌಹಾಣ, ಮಲ್ಲಯ್ಯ ಹಿರೇಮಠ, ಶಿವಯ್ಯ ಹಿರೇಮಠ, ಸಂಗಪ್ಪ ಕಟ್ಟಿಮನಿ, ಹನುಮಂತ ಕಟ್ಟಿಮನಿ ಬಂಧಿತ ಆರೋಪಿಗಳು. ಈ ಗ್ಯಾಂಗ್ ಯಲಬುರ್ಗಾ ಭಾಗದ ಅರಣ್ಯ ಪ್ರದೇಶಗಳಲ್ಲಿ ಕೃಷ್ಣ ಮೃಗಗಳ ಬೇಟೆಯಾಡಿ ಚರ್ಮ, ಕೊಂಬುಗಳ ಮಾರಾಟ ಮಾಡುತ್ತಿದ್ದರು. ಸದ್ಯ ಖಚಿತ ಮಾಹಿತಿ ಮೆರೆಗೆ ದಾಳಿ ಮಾಡಿದ ಕೊಪ್ಪಳ ಅರಣ್ಯ ಇಲಾಖೆ ಅಧಿಕಾರಿಗಳು 6 ಮಂದಿಯನ್ನು ಬಂಧಿಸಿದ್ದಾರೆ.
Published On - 11:18 am, Tue, 8 September 20