ಮಲೆ ಮಹದೇಶ್ವರ ಅಡವಿಯಲ್ಲಿ ಜಿಂಕೆ ಬೇಟೆಯಾಡಿದ ಕಿರಾತಕ ಅರೆಸ್ಟ್
ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಜಿಂಕೆ ಬೇಟೆಯಾಡಿ ಅದರ ಮಾಂಸ ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಮುರುಗೇಗೌಡ (45) ಬಂಧಿತ ಬೇಟೆಗಾರ ಎಂದು ತಿಳಿದುಬಂದಿದೆ. ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಜಿಂಕೆ ಬೇಟೆಯಾಡಿದ್ದ ಬಂಧಿತ ಆರೋಪಿ ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಬಂಧಿತನ ಬಳಿ ಒಂದು ನಳಿಕೆಯ ನಾಡ ಬಂದೂಕು, ಮದ್ದು ಗುಂಡು ಹಾಗೂ 20 ಕೆ.ಜಿ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಸಿಬ್ಬಂದಿ […]

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಜಿಂಕೆ ಬೇಟೆಯಾಡಿ ಅದರ ಮಾಂಸ ಸಾಗಿಸುತ್ತಿದ್ದ ಆರೋಪಿಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಮುರುಗೇಗೌಡ (45) ಬಂಧಿತ ಬೇಟೆಗಾರ ಎಂದು ತಿಳಿದುಬಂದಿದೆ.
ಮಲೆ ಮಹದೇಶ್ವರ ವನ್ಯಜೀವಿ ವಿಭಾಗದಲ್ಲಿ ಜಿಂಕೆ ಬೇಟೆಯಾಡಿದ್ದ ಬಂಧಿತ ಆರೋಪಿ ಹನೂರು ತಾಲೂಕಿನ ಕಾಂಚಳ್ಳಿ ಗ್ರಾಮದ ನಿವಾಸಿ ಎಂದು ಹೇಳಲಾಗಿದೆ. ಬಂಧಿತನ ಬಳಿ ಒಂದು ನಳಿಕೆಯ ನಾಡ ಬಂದೂಕು, ಮದ್ದು ಗುಂಡು ಹಾಗೂ 20 ಕೆ.ಜಿ ಜಿಂಕೆ ಮಾಂಸವನ್ನು ಅರಣ್ಯ ಇಲಾಖೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.
ಜೊತೆಗೆ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನು ನಾಲ್ವರು ಬೇಟೆಗಾರರು ಪರಾರಿಯಾಗಿದ್ದಾರೆ. ಕಾಂಚಳ್ಳಿ ಗ್ರಾಮದ ನಿವಾಸಿಗಳಾದ ಪೆರುಮಾಳ ಶೆಟ್ಟಿ, ಮಾದೇಶ, ಮುತ್ತೇಗೌಡ ಮತ್ತು ಗೋವಿಂದೇಗೌಡ ಪರಾರಿಯಾಗಿರುವ ಆರೋಪಿಗಳು. ಪರಾರಿಯಾದವರಿಗಾಗಿ ಅರಣ್ಯ ಇಲಾಖೆ ಸಿಬ್ಬಂದಿ ಶೋಧ ನಡೆಸುತ್ತಿದ್ದಾರೆ. ಜೊತೆಗೆ, ಬಂಧಿತ ಮುರುಗೇಗೌಡನನ್ನ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.



