10 ಕಾಡಾನೆ ಓಡಿಸುವ ವೇಳೆ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು, ಎಲ್ಲಿ?

ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ(30) ಸಾವಿಗೀಡಾದ ವಾಚರ್. ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆ ಹಿಂಡು ಧುತ್ತನೇ ಎದುರಾದಾಗ.. ಫಾರೆಸ್ಟ್ ಗಾರ್ಡ್ ಪ್ರಕಾಶ್ ಅಡಚದ ಎಂಬುವರ ಬಂದೂಕಿನಿಂದ ಗುಂಡು ಆಕಸ್ಮಿಕವಾಗಿ ಹಾರಿದೆ. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಓಡಿಸುವ ವೇಳೆ‌ ಈ ದುರ್ಘಟನೆ ನಡೆದಿದೆ. ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆಗಳ […]

10 ಕಾಡಾನೆ ಓಡಿಸುವ ವೇಳೆ ಗುಂಡು ತಗುಲಿ ಫಾರೆಸ್ಟ್ ವಾಚರ್ ಸಾವು, ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:Aug 07, 2020 | 7:29 AM

ಮಂಡ್ಯ: ಕಾಡಾನೆ ಓಡಿಸುವ ವೇಳೆ ಬಂದೂಕಿನಿಂದ ಹಾರಿದ ಗುಂಡು ತಗುಲಿ ಫಾರೆಸ್ಟ್ ವಾಚರ್ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕೂನನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶಿವನಂಜಯ್ಯ(30) ಸಾವಿಗೀಡಾದ ವಾಚರ್.

ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆ ಹಿಂಡು ಧುತ್ತನೇ ಎದುರಾದಾಗ.. ಫಾರೆಸ್ಟ್ ಗಾರ್ಡ್ ಪ್ರಕಾಶ್ ಅಡಚದ ಎಂಬುವರ ಬಂದೂಕಿನಿಂದ ಗುಂಡು ಆಕಸ್ಮಿಕವಾಗಿ ಹಾರಿದೆ. ಕೂನನಕೊಪ್ಪಲು ಗ್ರಾಮದಲ್ಲಿ ಬೀಡು ಬಿಟ್ಟಿದ್ದ ಕಾಡಾನೆಗಳ ಹಿಂಡನ್ನು ಓಡಿಸುವ ವೇಳೆ‌ ಈ ದುರ್ಘಟನೆ ನಡೆದಿದೆ. ಶಿಂಷಾ ಅರಣ್ಯ‌ ಪ್ರದೇಶದಿಂದ 10 ಕಾಡಾನೆಗಳ ಹಿಂಡು ಬಂದಿದ್ದವು.

ಆನೆಗಳನ್ನು ಬಂದೂಕು ಶಬ್ದದಿಂದ ಬೆದರಿಸಿ ವಾಪಾಸ್ ಕಾಡಿಗಟ್ಟಲು ಸಿಬ್ಬಂದಿ ಮುಂದಾದರು. ಜನರ ಕಿರುಚಾಟಕ್ಕೆ ಹೆದರಿದ ಆನೆಗಳು ಸಿಬ್ಬಂದಿಯ ಮೇಲೆ ದಾಳಿಗೆ ಮುಂದಾದವು. ಭಯದಿಂದ ಓಡುವ ವೇಳೆ ಫಾರೆಸ್ಟ್ ಗಾರ್ಡ್ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಹಾರಿದೆ. ಆಗ ಶಿವನಂಜಯ್ಯ ಬೆನ್ನಿಗೆ ಗುಂಡು ತಗುಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಳವಳ್ಳಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 7:29 am, Fri, 7 August 20

ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಎಐಸಿಸಿ ಕಟ್ಟಡಕ್ಕೆ ಗಾಂಧಿ ಭವನ ಅಂತ ಯಾಕೆ ಹೆಸರಿಟ್ಟಿಲ್ಲ? ಆರ್ ಅಶೋಕ
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಪಕ್ಷದ ವಿದ್ಯಮಾನಗಳಿಂದ ತಳಮಟ್ಟದ ಕಾರ್ಯಕರ್ತ ನೊಂದಿದ್ದಾನೆ: ಸುನೀಲ ಕುಮಾರ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಬಿಗ್​ಬಾಸ್ ಮನೆಯಲ್ಲಿ ‘ಯಜಮಾನ’, ಝಾನ್ಸಿ ಆವಾಜ್​ಗೆ ತಲೆತಗ್ಗಿಸಿದ ರಜತ್
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
ಭೈರತಿ ಸುರೇಶ್ ಕಾರಿಗೆ ಎಸ್ಕಾರ್ಟ್ ವಾಹನ ಟಚ್: ಪೊಲೀಸರಿಗೆ ಬೈಯ್ದ ಸಚಿವ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
Video: ರಿಯಲ್ ಎಸ್ಟೇಟ್ ಬ್ರೋಕರ್​ ಕೆನ್ನೆಗೆ ಬಾರಿಸಿದ ಬಿಜೆಪಿ ಸಂಸದ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ನೆಲಮಂಗಲ: ಚೆನ್ನಾಗಿದ್ದ ರಸ್ತೆಯನ್ನು ಅಗೆದ ಜಮೀನ್ದಾರರು, ಗ್ರಾಮಸ್ಥರ ಆಕ್ರೋಶ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
ದಲಿತ ಕಾಂಗ್ರೆಸ್ ನಾಯಕರು ಪ್ರತ್ಯೇಕ ಬಣವಾಗಿ ಗುರುತಿಸಿಕೊಳ್ಳುತ್ತಿದ್ದಾರೆ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
Live: ಬೆಳಗಾವಿ ಗಾಂಧಿ ಭಾರತ ಸಮಾವೇಶ ನೇರ ಪ್ರಸಾರ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಗಾಂಧಿ ಪುತ್ಥಳಿಯನ್ನು ಕೆತ್ತಿದ್ದಾರೆ
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್
ಅಮೆರಿಕ ಅಧ್ಯಕ್ಷರಾಗಿ ಪದಗ್ರಹಣ ಬಳಿಕ ಸಖತ್​ ಸ್ಟೆಪ್​​​ ಹಾಕಿದ ಟ್ರಂಪ್