ಮಡಿಕೇರಿ: 2018ರಲ್ಲಿ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ರಾಜ್ಯದಲ್ಲಿ ಭೀಕರ ಪ್ರವಾಹ ಸ್ಥಿತಿ ಎದುರಾಗಿತ್ತು. ಆಗ ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನೆರೆ ಬಂದಿತ್ತು. ಅಂದು ಕೊಡಗಿನ ಪ್ರವಾಹ ಸಂತ್ರಸ್ತರಿಗೆ, ಮದೆ ಹಾಗೂ ಜಂಬೂರಿನಲ್ಲಿ ಮನೆಗಳ ನಿರ್ಮಾಣಕ್ಕೆ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದೀಗ ಮನೆಗಳ ನಿರ್ಮಾಣ ಪೂರ್ಣಗೊಂಡಿದ್ದು, ಮೇ ತಿಂಗಳಾಂತ್ಯಕ್ಕೆ 463 ಮನೆಗಳ ಹಸ್ತಾಂತರಕ್ಕೆ ಸಿದ್ಧಗೊಂಡಿವೆ.
ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ಮದೆ, ಗಾಳಿಬೀಡು, ಜಂಬೂರಿನಲ್ಲಿ ಮನೆಗಳು ನಿರ್ಮಾಣಗೊಂಡಿವೆ. ಅಂದು ಪ್ರವಾಹ ಸಂತ್ರಸ್ತರ ನೋವನ್ನು ನಾನು ಕಂಡಿದ್ದೆ. ಈಗ ಅವರಿಗೆ ಮನೆ ಸಿಗುತ್ತಿದೆ, ಅವರ ಖುಷಿ ನನ್ನದೂ ಕೂಡ. ನಮ್ಮ ಕೆಲಸಗಳು ಮಾತನಾಡಬೇಕು, ಮಾತನಾಡುತ್ತಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಸಿಎಂ ಹೆಚ್ಡಿಕೆ ಸಂತಸ ಹಂಚಿಕೊಂಡಿದ್ದಾರೆ.
Published On - 12:06 pm, Fri, 15 May 20