DJ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆ!

ಬೆಂಗಳೂರು: ಶಾಸಕರ ಮನೆಗೆ ಬೆಂಕಿ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್ ಸಂಪತ್ ರಾಜ್ ಸದ್ಯ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸಂಪತ್ ರಾಜ್ ಬ್ಯಾಪಿಸ್ಟ್ ಆಸ್ಪತ್ರೆಯಿಂದ ಐದು ದಿನಗಳ ಹಿಂದೆಯೇ ಡಿಸ್ಚಾರ್ಜ್ ಮಾಡಿಸಿಕೊಂಡು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಯಾರಿಗೂ ತಿಳಿಯದ ಹಾಗೆ ಡಿಸ್ಚಾರ್ಜ್ ಮಾಡಿಸಿಕೊಂಡ ಮಾಜಿ ಮೇಯರ್​ ಕಳೆದ ಕೆಲವು ದಿನಗಳ ಹಿಂದೆ ಕೊವಿಡ್​ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂಪತ್ ರಾಜ್ […]

DJ ಹಳ್ಳಿ ಗಲಭೆ ಪ್ರಕರಣ: ಮಾಜಿ ಮೇಯರ್ ಸಂಪತ್ ರಾಜ್ ಆಸ್ಪತ್ರೆಯಿಂದ ನಾಪತ್ತೆ!

Updated on: Oct 30, 2020 | 3:17 PM

ಬೆಂಗಳೂರು: ಶಾಸಕರ ಮನೆಗೆ ಬೆಂಕಿ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಠಾಣಾ ವ್ಯಾಪ್ತಿಯಲ್ಲಿ ಗಲಭೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದ ಮಾಜಿ ಮೇಯರ್ ಸಂಪತ್ ರಾಜ್ ಸದ್ಯ ನಾಪತ್ತೆಯಾಗಿದ್ದಾರೆ ಎಂದು ಹೇಳಲಾಗಿದೆ. ಸಂಪತ್ ರಾಜ್ ಬ್ಯಾಪಿಸ್ಟ್ ಆಸ್ಪತ್ರೆಯಿಂದ ಐದು ದಿನಗಳ ಹಿಂದೆಯೇ ಡಿಸ್ಚಾರ್ಜ್ ಮಾಡಿಸಿಕೊಂಡು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.
ಯಾರಿಗೂ ತಿಳಿಯದ ಹಾಗೆ ಡಿಸ್ಚಾರ್ಜ್ ಮಾಡಿಸಿಕೊಂಡ ಮಾಜಿ ಮೇಯರ್​ ಕಳೆದ ಕೆಲವು ದಿನಗಳ ಹಿಂದೆ ಕೊವಿಡ್​ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಸಂಪತ್ ರಾಜ್ ಗುಣಮುಖದರಾಗಿ ಡಿಶ್ಚಾರ್ಜ್​ ಅಗುವ ವೇಳೆ ತಮಗೆ ಮಾಹಿತಿ ನೀಡುವಂತೆ ಸಿಸಿಬಿ ಅಧಿಕಾರಿಗಳು ಆಸ್ಪತ್ರೆಗೆ ತಿಳಿಸಿದ್ದರು.

ಆದರೆ, ಸಿಸಿಬಿಗೂ ಮಾಹಿತಿ ನೀಡದೆ ಆಸ್ಪತ್ರೆ ಸಿಬ್ಬಂದಿ ಸಂಪತ್​ ರಾಜ್​ರನ್ನು ಡಿಶ್ಚಾರ್ಜ್ ಮಾಡಿದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ಸದ್ಯ ಸಂಪತ್ ರಾಜ್​ಗಾಗಿ ಸಿಸಿಬಿ ಅಧಿಕಾರಿಗಳು ಹುಡುಕಾಟ ನಡೆಸುತ್ತಿದ್ದಾರೆ. ಜೊತೆಗೆ, NIA ಪೊಲೀಸರಿಂದಲೂ ಸಂಪತ್​ ರಾಜ್​ಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ.

ಇನ್ನು, ಪ್ರಕರಣದ 51 ನೇ ಆರೋಪಿ ಸಂಪತ್ ರಾಜ್ ನಾಪತ್ತೆಯಾದ ಹಿನ್ನಲೆಯಲ್ಲಿ ಬ್ಯಾಪಿಸ್ಟ್ ಆಸ್ಪತ್ರೆ ವಿರುದ್ಧ ಸಿಸಿಬಿ ಕ್ರಮಕ್ಕೆ ಮುಂದಾಗಿದೆ. ಸಂಪತ್ ರಾಜ್ ಡಿಶ್ಚಾರ್ಜ್ ಆಗುವ ಬಗ್ಗೆ ಮಾಹಿತಿ ನೀಡದ ಆಸ್ಪತ್ರೆಗೆ ತೆರಳಿ ಸಿಸಿಬಿ ಅಧಿಕಾರಿಗಳು ನೋಟಿಸ್ ಜಾರಿಮಾಡಿದೆ.