ಮಾಜಿ ಮೇಯರ್ ಸಂಪತ್ ರಾಜ್ ಮತ್ತೆ CCB ಕಸ್ಟಡಿಗೆ
ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ಮಾಜಿ ಮೇಯರ್ ಸಂಪತ್ ರಾಜ್ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ. ಸಂಪತ್ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ. ಸಂಪತ್‌ರಾಜ್ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ […]

ಬೆಂಗಳೂರು: ಡಿ.ಜೆ ಹಳ್ಳಿ-ಕೆ.ಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣ ಮತ್ತು ಶಾಸಕರ ಮನೆಗೆ ಬೆಂಕಿ ಹಚ್ಚಿದ ಪ್ರಕರಣ ಸಂಬಂಧ ಅರೆಸ್ಟ್ ಆಗಿರುವ ಮಾಜಿ ಮೇಯರ್ ಸಂಪತ್ ರಾಜ್ನನ್ನು ಮತ್ತೆ ಸಿಸಿಬಿ ಕಸ್ಟಡಿಗೆ ನೀಡಲಾಗಿದೆ.
ಸಂಪತ್ ರಾಜ್ ನಾಳೆ ಮಧ್ಯಾಹ್ನ 1.30 ರವರೆಗೆ ಸಿಸಿಬಿ ಕಸ್ಟಡಿಯಲ್ಲಿ ಇರಲಿದ್ದಾರೆ. 67 ನೇ ಸಿಸಿಹೆಚ್ ಜಡ್ಜ್ ಕಾತ್ಯಾಯನಿ ಈ ಆದೇಶ ಹೊರಡಿಸಿದ್ದಾರೆ.
ಸಂಪತ್‌ರಾಜ್ ತನಿಖೆಗೆ ಸರಿಯಾಗಿ ಸಹಕಾರ ನೀಡುತ್ತಿಲ್ಲ. ಸಂಪತ್‌ರಾಜ್ 2 ತಿಂಗಳ ಕಾಲ ತಲೆಮರೆಸಿಕೊಂಡಿದ್ದರು. ಹೀಗಾಗಿ, ಅವರಿಗೆ ಸಹಕರಿಸಿದವರ ತನಿಖೆ ನಡೆಸಬೇಕಿದೆ. ಎಲ್ಲಾ ಘಟನೆಗೆ ಸೋಷಿಯಲ್ ಮೀಡಿಯಾ ಬಳಕೆ ಕಾರಣ. ಹೀಗಾಗಿ ಸೋಷಿಯಲ್ ಮೀಡಿಯಾ ಬಳಕೆ ಬಗ್ಗೆ ತನಿಖೆ ನಡೆಸಬೇಕಿದೆ. ಕೆಲವು ಆರೋಪಿಗಳು ಈಗಲೂ ತಲೆಮರೆಸಿಕೊಂಡಿದ್ದಾರೆ. ಗಲಭೆ ಪ್ರಕರಣ ಸಂಬಂಧ ತನಿಖೆ ಬಾಕಿ ಇದೆ ಎಂದು ವಿಚಾರಣೆ ವೇಳೆ ಸಿಸಿಬಿ ಎಸ್‌ಪಿಪಿ ಪ್ರಸನ್ನ ಕುಮಾರ್ ಮನವಿ ಮಾಡಿದ್ದರು.
Published On - 11:38 am, Thu, 19 November 20



