ಮಾಜಿ ಸಚಿವ ಸಿ.ಚೆನ್ನಿಗಪ್ಪ ವಿಧಿವಶ
ಬೆಂಗಳೂರು: ಜೆಡಿಎಸ್ನ ಮಾಜಿ ಸಚಿವ ಚೆನ್ನಿಗಪ್ಪ(72) ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿ.ಚನ್ನಿಗಪ್ಪ ಅವರು ಕಳೆದೆರೆಡು ತಿಂಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 5.30ರಲ್ಲಿ ಕೊನೆಯುಸಿರೆಳೆದಿದ್ದಾರೆ. ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿಯ ಮನೆ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಅಂತಿಮ ವಿಧಿ ವಿಧಾನಗಳೊಂದಿಗೆ ಕಾರ್ಯ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ತುಮಕೂರಿನ ಕೊರಟಗೆರೆ ಕ್ಷೇತ್ರದಿಂದ ಮೂರು […]
ಬೆಂಗಳೂರು: ಜೆಡಿಎಸ್ನ ಮಾಜಿ ಸಚಿವ ಚೆನ್ನಿಗಪ್ಪ(72) ಇಂದು ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಸಿ.ಚನ್ನಿಗಪ್ಪ ಅವರು ಕಳೆದೆರೆಡು ತಿಂಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ 5.30ರಲ್ಲಿ ಕೊನೆಯುಸಿರೆಳೆದಿದ್ದಾರೆ.
ನೆಲಮಂಗಲ ತಾಲೂಕಿನ ಬೈರನಾಯಕನಹಳ್ಳಿಯ ಮನೆ ಬಳಿ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಅಂತಿಮ ವಿಧಿ ವಿಧಾನಗಳೊಂದಿಗೆ ಕಾರ್ಯ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಮಕೂರಿನ ಕೊರಟಗೆರೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಿ.ಚೆನ್ನಿಗಪ್ಪ ಅವರು ಧರ್ಮಸಿಂಗ್ ಅವಧಿಯಲ್ಲಿ ಅಬಕಾರಿ ಹಾಗೂ ರೇಷ್ಮೆ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ಸಿ.ಚನ್ನಿಗಪ್ಪ ಅವರು ಅರಣ್ಯ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
Published On - 12:24 pm, Fri, 21 February 20