Coronavirus in Nursing Students ಮಂಗಳೂರಿನ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ
48 Nursing Student Test Positive for Coronavirus ಮಂಗಳೂರು ಹೊರವಲಯದ ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಇರೋದು ದೃಢಪಟ್ಟಿದೆ.
ಮಂಗಳೂರು: ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಬೆನ್ನು ಬಿಡದೆ ಕಾಡುತ್ತಿದೆ. ಮಂಗಳೂರು ಹೊರವಲಯದ ಉಳ್ಳಾಲದ ಆಲಿಯಾ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಿಗೆ ಕೊರೊನಾ ಇರೋದು ದೃಢಪಟ್ಟಿದೆ.
100 ವಿದ್ಯಾರ್ಥಿಗಳ ಪೈಕಿ 48 ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ವರದಿ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ಸದ್ಯ ಆ ಪ್ರದೇಶವನ್ನು ಕಂಟೈನ್ ಮೆಂಟ್ ಝೋನ್ ಎಂದು ಘೋಷಿಸಲಾಗಿದೆ.
ಕೊರೊನಾ ಸೋಂಕು ದೃಢಪಟ್ಟ 48 ವಿದ್ಯಾರ್ಥಿಗಳು ಕೇರಳ ಮೂಲದವರು. ಇವರು ನರ್ಸಿಂಗ್ ಶಿಕ್ಷಣಕ್ಕಾಗಿ ಕೇರಳದಿಂದ ಬಂದು ಹಾಸ್ಟೆಲ್ನಲ್ಲೇ ಉಳಿದುಕೊಂಡು ಶಿಕ್ಷಣ ಪಡೆಯುತ್ತಿದ್ದರು. ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕಾಲೇಜು, ಹಾಸ್ಟೆಲ್ ಸೀಲ್ ಡೌನ್ ಮಾಡಲಾಗಿದೆ.
27 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೊನಾ; ದೇವರಾಜ ಅರಸು ಮೆಡಿಕಲ್ ಕಾಲೇಜಿನಲ್ಲಿ ಹೆಚ್ಚಿದ ಆತಂಕ