AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿದ್ಯಾಗಮ ಬದಲು ಕೊರೊನಾ ಬಂತು.. ವಠಾರ ಶಾಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಸೋಂಕು

ಕಲಬುರಗಿ: ಶಾಲೆ ಓಪನ್​ ಮಾಡ್ಬೇಕಾ ಬೇಡ್ವಾ ಅನ್ನೋ ಗೊಂದಲದಲ್ಲಿದ್ದ ರಾಜ್ಯ ಸರ್ಕಾರ ಮತ್ತ ಪೋಷಕರಿಗೆ ಈ ಸುದ್ದಿ ಆಘಾತ ತಂದೊಡ್ಡಿದೆ. ಯಾಕಂದ್ರೆ, ವಠಾರ ಶಾಲೆಗೆ ಹೋಗಿದ್ದ 4 ಮಕ್ಕಳಿಗೆ ಕೊರೊನಾ ದೃಢವಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ್ ಗ್ರಾಮದಲ್ಲಿ ನಡೆದಿದೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯನ್ನು ಪ್ರಾರಂಭಿಸಿದ್ದು ಸುಮಾರು 250 ಮಕ್ಕಳು ಶಾಲೆಗೆ ಬರುತ್ತಿದ್ದರು ಎಂದು ಹೇಳಲಾಗಿದೆ. ಈ ಹಿಂದೆ ಶಾಲೆಯ ಮುಖ್ಯ ಶಿಕ್ಷಕನಿಗೆ ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ 250 ಮಕ್ಕಳಿಗೆ ಕೊರೊನಾ […]

ವಿದ್ಯಾಗಮ ಬದಲು ಕೊರೊನಾ ಬಂತು.. ವಠಾರ ಶಾಲೆಯಲ್ಲಿ ಶಿಕ್ಷಕರು, ಮಕ್ಕಳಿಗೆ ಸೋಂಕು
KUSHAL V
| Edited By: |

Updated on: Oct 09, 2020 | 11:09 AM

Share

ಕಲಬುರಗಿ: ಶಾಲೆ ಓಪನ್​ ಮಾಡ್ಬೇಕಾ ಬೇಡ್ವಾ ಅನ್ನೋ ಗೊಂದಲದಲ್ಲಿದ್ದ ರಾಜ್ಯ ಸರ್ಕಾರ ಮತ್ತ ಪೋಷಕರಿಗೆ ಈ ಸುದ್ದಿ ಆಘಾತ ತಂದೊಡ್ಡಿದೆ. ಯಾಕಂದ್ರೆ, ವಠಾರ ಶಾಲೆಗೆ ಹೋಗಿದ್ದ 4 ಮಕ್ಕಳಿಗೆ ಕೊರೊನಾ ದೃಢವಾಗಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಮಾಶಾಳ್ ಗ್ರಾಮದಲ್ಲಿ ನಡೆದಿದೆ. ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯನ್ನು ಪ್ರಾರಂಭಿಸಿದ್ದು ಸುಮಾರು 250 ಮಕ್ಕಳು ಶಾಲೆಗೆ ಬರುತ್ತಿದ್ದರು ಎಂದು ಹೇಳಲಾಗಿದೆ. ಈ ಹಿಂದೆ ಶಾಲೆಯ ಮುಖ್ಯ ಶಿಕ್ಷಕನಿಗೆ ಸೋಂಕು ದೃಢವಾಗಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ 250 ಮಕ್ಕಳಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಈ ಪೈಕಿ ನಾಲ್ವರಲ್ಲಿ ಸೋಂಕು ಪತ್ತೆಯಾಗಿದ್ದು ಮುಖ್ಯ ಶಿಕ್ಷಕರಿಂದ ಮಕ್ಕಳಿಗೆ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ನಾಲ್ವರು ವಿದ್ಯಾರ್ಥಿಗಳಿಗೆ ಹೋಂ ಐಸೋಲೇಷನ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಜೊತೆಗೆ, ಆರೋಗ್ಯ ಇಲಾಖೆ ಇನ್ನೂ 20 ವಿದ್ಯಾರ್ಥಿಗಳ ವರದಿಯ ನಿರೀಕ್ಷೆಯಲ್ಲಿದೆ.

ಏನಿದು ವಿದ್ಯಾಗಮ ಯೋಜನೆ? ವಿದ್ಯಾಗಮ ಯೋಜನೆ ಹೆಸ್ರಲ್ಲಿ ಮಕ್ಕಳಿಗೆ ತರಗತಿ ನಡೆಸಲಾಗ್ತಾ ಇದೆ. ಗ್ರಾಮೀಣ ಪ್ರದೇಶದಲ್ಲಿ ಸರ್ಕಾರಿ ಶಾಲೆ ಮಕ್ಕಳಿಗೆ ತರಗತಿ ನಡೆಸಲಾಗ್ತಾ ಇದೆ. ವಠಾರದಲ್ಲಿರೋ ಅಥವಾ ಅಕ್ಕಪಕ್ಕದಲ್ಲಿರೋ ಮಕ್ಕಳನ್ನ ಸೇರಿಸಿ ಕ್ಲಾಸ್ ಮಾಡಲಾಗುತ್ತಿದ್ದು ಸರ್ಕಾರದ ನಿಯಮದಂತೆ 5 ಮಕ್ಕಳನ್ನ ಮೀರಿ ಸೇರಿಸೋ ಹಾಗಿಲ್ಲ. ಅಂದರೆ, ತರಗತಿ ನಡೆಸೋದಕ್ಕೆ ಮಿತಿ ಮೀರಿ ಮಕ್ಕಳನ್ನ ತರಗತಿಗೆ ಕರೆಯೋ ಹಾಗಿಲ್ಲ.

ಆದರೆ, ಪ್ರಸ್ತುತ ಸರ್ಕಾರದ ಆದೇಶವನ್ನು ಧಿಕ್ಕರಿಸಿ 30-40 ಮಕ್ಕಳನ್ನ ಒಂದೇ ಕಡೆ ಸೇರಿಸಿ ತರಗತಿ ತೆಗೆದುಕೊಳ್ತಿದ್ದಾರೆ. ಹಾಗಾಗಿ, ವಿದ್ಯಾಗಮ ಯೋಜನೆಯೇ ಮಕ್ಕಳಿಗೆ ಮಾರಕವಾಗುತ್ತಿದೆ. ಈ ಹಿಂದೆ, ವಿದ್ಯಾಗಮ ಯೋಜನೆ ಬಗ್ಗೆ ಖಾಸಗಿ ಶಾಲೆಗಳು ಸಹ ತಕರಾರು ಎತ್ತಿದ್ದವು.

Follow Us
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ