ಕಂಟೇನರ್​ಗೆ ಹಿಂಬದಿಯಿಂದ ಕಾರ್ ಡಿಕ್ಕಿ; ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು

|

Updated on: Feb 13, 2021 | 10:48 AM

4 bangaloreans died in accident near hassan ಕಂಟೈನರ್‌ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ. ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಾರ್ಯಕ್ರಮವೊಂದಕ್ಕೆ ಸ್ನೇಹಿತರು ತೆರಳುತ್ತಿದ್ದರು.

ಕಂಟೇನರ್​ಗೆ ಹಿಂಬದಿಯಿಂದ ಕಾರ್ ಡಿಕ್ಕಿ; ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವು
ಅಪಘಾತದಲ್ಲಿ ನಜ್ಜುಗುಜ್ಜಾದ ಕಾರು
Follow us on

ಹಾಸನ: ಕಂಟೇನರ್​ಗೆ ಕಾರು ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ- ಚನ್ನರಾಯಪಟ್ಟಣ ಹೊರವಲಯದ ರಾಷ್ಟ್ರೀಯ ಹೆದ್ದಾರಿ 75 ರಲ್ಲಿ ನಡೆದಿದೆ. ಕಂಟೈನರ್‌ ಲಾರಿಗೆ ಹಿಂಬದಿಯಿಂದ ಕಾರ್ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ ಬೆಂಗಳೂರು ಮೂಲದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್, ಚೇತನ್, ವಿಕ್ರಂ, ಅಭಿಷೇಕ್ ಮೃತ ದುರ್ದೈವಿಗಳಾಗಿದ್ದಾರೆ. 4 bangaloreans died in accident near hassan

ಬೆಂಗಳೂರಿನಿಂದ ಚಿಕ್ಕಮಗಳೂರಿನ ಕಾರ್ಯಕ್ರಮವೊಂದಕ್ಕೆ ಸ್ನೇಹಿತರು ತೆರಳುತ್ತಿದ್ದರು. ಮಂಗಳೂರಿನತ್ತ ಹೊರಟಿದ್ದ ಕಂಟೇನರ್​ಗೆ ಹಿಂಬದಿಯಿಂದ ಕಾರ್ ಡಿಕ್ಕಿ ಹೊಡೆದ ಪರಿಣಾಮದಿಂದಾಗಿ ಈ ಅವಘಡ ಸಂಭವಿಸಿದೆ. ಚನ್ನರಾಯಪಟ್ಟಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: Vizag Accident: ವಿಶಾಖಪಟ್ಟಣಂನ ಅರಕು ಘಾಟ್​​ ರಸ್ತೆಯಲ್ಲಿ ಖಾಸಗಿ ಬಸ್​​ ಕಂದಕಕ್ಕೆ ಉರುಳಿ 8 ಪ್ರಯಾಣಿಕರು ಸಾವು

Published On - 10:21 am, Sat, 13 February 21