ಬೆಳಗಾವಿ: ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ರಾಯಬಾಗ ರೈಲ್ವೆ ನಿಲ್ದಾಣದ ಬಳಿ ನಡೆದಿದೆ. ಬೀರಡಿಯ ಸಾತಪ್ಪ ಸುತಾರ್(60), ಮಹಾದೇವಿ(50), ಮಕ್ಕಳಾದ ದತ್ತಾತ್ರೇಯ(28), ಸಂತೋಷ(25) ಆತ್ಮಹತ್ಯೆ ಮಾಡಿಕೊಂಡಿರುವವರು.
ನಿನ್ನೆ ರಾತ್ರಿ ನಿಜಾಮುದ್ದೀನ್ ಎಕ್ಸ್‌ಪ್ರೆಸ್ ರೈಲಿಗೆ ತಲೆಕೊಟ್ಟು ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ರಾಯಬಾಗ ತಾಲೂಕು ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಮೃತದೇಹಗಳನ್ನು ರವಾನಿಸಲಾಗಿದೆ. ಸ್ಥಳಕ್ಕೆ ಬೆಳಗಾವಿ ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ ಪ್ರಕರಣ: ವಿಧಾನಪರಿಷತ್ ಸದಸ್ಯರಿಗೂ ತಟ್ಟಲಿದೆ ತನಿಖೆ ಬಿಸಿ