ಬೈಕ್‌ನಲ್ಲಿ ತೆರಳುತ್ತಿದ್ದವರ ಮೇಲೆ ದುಷ್ಕರ್ಮಿಗಳಿಂದ ಅಟ್ಯಾಕ್.. ಯುವಕರ ಸ್ಥಿತಿ ಚಿಂತಾಜನಕ
ಬೈಕ್‌ನಲ್ಲಿ ತೆರಳುತ್ತಿದ್ದ ಅರುಣ್ ಮತ್ತು ತೇಜುನನ್ನು ಅಡ್ಡಕಟ್ಟಿ ಇಬ್ಬರು ಯುವಕರ ಮೇಲೆ ನಾಲ್ವರು ದುಷ್ಕರ್ಮಿಗಳು ಮಚ್ಚು, ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ.

ಮೈಸೂರು: ನಾಲ್ವರು ದುಷ್ಕರ್ಮಿಗಳು ಬೈಕ್‌ನಲ್ಲಿ ತೆರಳ್ತಿದ್ದ ಇಬ್ಬರು ಯುವಕರ ಮೇಲೆ ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಮೈಸೂರು ನಗರದ ಜೆಎಲ್‌ಬಿ ರಸ್ತೆಯಲ್ಲಿ ನಡೆದಿದೆ. ಘಟನೆಯಿಂದ ಇಬ್ಬರು ಯುವಕರಿಗೆ ಗಾಯಗಳಾಗಿವೆ.
ಬೈಕ್‌ನಲ್ಲಿ ತೆರಳುತ್ತಿದ್ದ ಅರುಣ್ ಮತ್ತು ತೇಜುನನ್ನು ಅಡ್ಡಕಟ್ಟಿ ಇಬ್ಬರು ಯುವಕರ ಮೇಲೆ ನಾಲ್ವರು ದುಷ್ಕರ್ಮಿಗಳು ಮಚ್ಚು, ಡ್ಯಾಗರ್‌ನಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದು ಓರ್ವ ಯುವಕನ ಸ್ಥಿತಿ ಗಂಭೀರವಾಗಿದೆ. ಮತ್ತೋರ್ವ ಗಾಯಾಳುವಿಗೆ ಕೆ.ಆರ್.ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಲಕ್ಷ್ಮೀಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಕೆ.ಆರ್ ವಿಭಾಗದ ಎಸಿಪಿ ಪೂರ್ಣಚಂದ್ರ ತೇಜಸ್ವಿ, ಲಕ್ಷ್ಮೀಪುರಂ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ವೆಂಕಟೇಶ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಲ್ಲೆಗೆ ನಿಖರ ಕಾರಣವೇನೆಂಬುವುದು ತಿಳಿದು ಬಂದಿಲ್ಲ. ಘಟನೆ ಸಂಬಂಧ ಪೊಲೀಸರು ತನಿಖ ಶುರು ಮಾಡಿದ್ದಾರೆ.
ಜಮೀನು ವಿಚಾರ: ಬಾಮೈದನ ಮೇಲೆ ಇಬ್ಬರು ಭಾವಂದಿರಿಂದ ಹಲ್ಲೆ, ಯಾವೂರಲ್ಲಿ?
Published On - 6:54 am, Tue, 19 January 21