AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಚಿತ ಲಸಿಕೆ: ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9:30ಕ್ಕೆ ಚಾಲನೆ ನೀಡಲಿದ್ದಾರೆ.

ಉಚಿತ ಲಸಿಕೆ: ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ
ಇಂದಿನಿಂದ ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ
TV9 Web
| Updated By: ಆಯೇಷಾ ಬಾನು|

Updated on:Jan 03, 2022 | 12:13 PM

Share

ಬೆಂಗಳೂರು: ಇಂದಿನಿಂದ ದೇಶಾದ್ಯಂತ ಮಕ್ಕಳಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ಸಿಲಿಕಾನ್ ಸಿಟಿಯಲ್ಲೂ 15ರಿಂದ 18 ವರ್ಷದವರಿಗೆ ಲಸಿಕೆ ನೀಡಲು ಭರ್ಜರಿ ತಯಾರಿ ನಡೆದಿದೆ. ಬೆಂಗಳೂರಿನ ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಕಾಲೇಜಿನಲ್ಲಿ ಲಸಿಕಾ ಕಾರ್ಯಕ್ರಮಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಬೆಳಗ್ಗೆ 9:30ಕ್ಕೆ ಚಾಲನೆ ನೀಡಲಿದ್ದಾರೆ. ರಾಜ್ಯದಲ್ಲಿ ಅಂದಾಜು 45 ಲಕ್ಷ ಮಕ್ಕಳು ಕೋವಿಡ್ ಲಸಿಕೆ ಪಡೆಯಲು ಅರ್ಹತೆ ಹೊಂದಿದ್ದು. ಬೆಂಗಳೂರಿನಲ್ಲಿ 7 ಲಕ್ಷ ಮಕ್ಕಳನ್ನ ಬಿಬಿಎಂಪಿ ಗುರುತಿಸಿದೆ.

ಶಾಲೆ ಕಾಲೇಜುಗಳಲ್ಲೇ ಮಕ್ಕಳಿಗೆ ವ್ಯಾಕ್ಸಿನ್ ನೀಡಲು ತೀರ್ಮಾನ ಮಾಡಲಾಗಿದೆ. ರಾಜ್ಯದಲ್ಲಿ ಪ್ರಸ್ತುತ 25 ಲಕ್ಷ ಡೋಸ್ ಕೋವ್ಯಾಕ್ಸಿನ್ ಲಸಿಕೆಯನ್ನು ಸಂಗ್ರಹಿಸಿಟ್ಟುಕೊಳ್ಳಲಾಗಿದ್ದು, ನಾಳೆಯೊಳಗೆ 10ರಿಂದ 12 ಲಕ್ಷ ಡೋಸ್ ಲಸಿಕೆ ಕೇಂದ್ರದಿಂದ ಬರುವ ನಿರೀಕ್ಷೆ ಇದೆ. ಈ ಹಿಂದೆ ಕಾಲೇಜುಗಳಲ್ಲಿ ಲಸಿಕೆ ನೀಡಿದ ಮಾದರಿಯಲ್ಲಿ 15 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲಿ ವ್ಯಾಕ್ಸಿನ್ ಹಾಕಲು ಕ್ರಮ ಕೈಗೊಳ್ಳಲಾಗಿದೆ. ಲಸಿಕಾ ಕೇಂದ್ರಗಳ ಬಳಿ 30 ನಿಮಿಷಗಳ ವಿಶ್ರಾಂತಿ ಪಡೆಯಲು ಸಹಕಾರಿಯಾಗುವಂತೆ ಕೊಠಡಿಗಳನ್ನು ನಿರ್ಮಿಸಲಾಗುತ್ತಿದೆ. ಲಸಿಕೆ ನೀಡುವ ಎಲ್ಲಾ ಶಾಲೆಗಳ ಬಳಿ ಆಂಬುಲೆನ್ಸ್ ವ್ಯವಸ್ಥೆ ಕೂಡ ಮಾಡಲಾಗುತ್ತಿದೆ.

ಆಧಾರ್ ಕಾರ್ಡ್, ಸ್ಕೂಲ್ ಐಡಿ ಕಾರ್ಡ್ ಇದ್ರೆ ವ್ಯಾಕ್ಸಿನ್ ಮೊದಲ ಹಂತದಲ್ಲಿ ಇಂದಿನಿಂದ 15 ರಿಂದ 18 ವರ್ಷದವರಿಗೆ ಲಸಿಕೆ ವಿತರಣೆ ಅಭಿಯಾನ ಶುರುವಾಗಲಿದೆ. ಅಭಿಯಾನಕ್ಕೆ ಬೆಂಗಳೂರಿನ ಶಾಲೆ, ಕಾಲೇಜುಗಳು ಸಜ್ಜಾಗಿವೆ. ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿಯಿಂದ ಸಿಕ್ಕ ಮಾರ್ಗಸೂಚಿಯಂತೆ ಲಸಿಕಾ ಕೇಂದ್ರಗಳು ಸಿದ್ಧತೆ ಮಾಡಿಕೊಂಡಿವೆ.

ಮೂಡಲಪಾಳ್ಯದ ಭೈರವೇಶ್ವರಿನಗರದ ಬಿಬಿಎಂಪಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಇಂದು ಬೆಳಗ್ಗೆ 9:30ಕ್ಕೆ ಸಿಎಂ ಬೊಮ್ಮಾಯಿ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಬೆಂಗಳೂರಿನಲ್ಲಿ 15 ರಿಂದ 18 ವರ್ಷೊದಳಗಿನ ಒಟ್ಟು 7 ಲಕ್ಷ ಮಕ್ಕಳಿದ್ದಾರೆ. ಇವ್ರೆಲ್ಲರಿಗೂ ವ್ಯಾಕ್ಸಿನ್ ನೀಡಲು ಬಿಬಿಎಂಪಿ ಸಜ್ಜಾಗಿದೆ.

ಬೆಂಗಳೂರಲ್ಲಿ 5 ಸಾವಿರದ 400 ಶಾಲೆಗಳು, 577 ಪಿಯು ಕಾಲೇಜುಗಳಿವೆ. ಲಸಿಕೆ ನೀಡೋದಕ್ಕೆ ನೆರವಾಗಲಿ ಅಂತಾ ಬಿಬಿಎಂಪಿ ಇವನ್ನ ಡಿವೈಡ್ ಮಾಡಿಕೊಂಡಿದೆ. ಇಂದು 220 ಶಾಲೆಗಳಲ್ಲಿ ಲಸಿಕೆ ಕಾರ್ಯಕ್ರಮ ನಡೆಯಲಿದೆ. ದಿನಕ್ಕೆ 50 ಸಾವಿರ ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಪ್ರತಿ ದಿನ ಒಂದು ಶಾಲೆ ಆಯ್ಕೆ ಮಾಡಿ ಲಸಿಕೆ ನೀಡಲು ಪ್ಲ್ಯಾನ್ ಮಾಡಲಾಗಿದೆ. ಲಸಿಕಾ ಕೇಂದ್ರದಲ್ಲಿ ಆ್ಯಂಬುಲೆನ್ಸ್ ವ್ಯವಸ್ಥೆ ಇರಲಿದೆ. ಒಂದ್ವೇಳೆ ವಿದ್ಯಾರ್ಥಿಗೆ ಕೈ ನೋವು, ಸುಸ್ತು ಜ್ವರ ಕಾಣಿಸಿಕೊಂಡ್ರೆ ರಜೆ ನೀಡುವಂತೆ ಸೂಚಿಸಲಾಗಿದೆ.

ಮಕ್ಕಳಿಗೆ ಲಸಿಕೆ ನೀಡಲು ಜಿಲ್ಲೆಗಳಲ್ಲೂ ಸಜ್ಜು ಇನ್ನು ರಾಜ್ಯದ ವಿವಿಧ ಜಿಲ್ಲೆಗಳೂ ಕೂಡ 15 ವರ್ಷ ಮೇಲ್ಪಟ್ಟವರಿಗೆ ವ್ಯಾಕ್ಸಿನ್ ನೀಡಲು ಸಜ್ಜಾಗಿವೆ. ಧಾರವಾಡ ಜಿಲ್ಲೆಯಲ್ಲಿ 95,774 ಮಕ್ಕಳಿಗೆ ಲಸಿಕೆ ನೀಡಿದ್ರೆ, ಕಲಬುರಗಿ ಜಿಲ್ಲೆಯಲ್ಲಿ 1 ಲಕ್ಷದ 60 ಸಾವಿರ, ಬಾಗಲಕೋಟೆಯಲ್ಲಿ, 1 ಲಕ್ಷ 2 ಸಾವಿರ, ಬೀದರ್ 1,05,083, ತುಮಕೂರು, 1 ಲಕ್ಷದ 22 ಸಾವಿರ , ಬೆಳಗಾವಿ ಜಿಲ್ಲೆಯಲ್ಲಿ 3,01,828, ರಾಯಚೂರು 1,14,953, ಮೈಸೂರು 1,47,279, ಕೊಪ್ಪಳ 84, 516, ಬಳ್ಳಾರಿ-ವಿಜಯನಗರ 1,70344, ರಾಮನಗರ 48, 700, ಉಡುಪಿ 45, 600, ಚಿತ್ರದುರ್ಗ76,142, ಚಿಕ್ಕಮಗಳೂರು 48,707, ಶಿವಮೊಗ್ಗದಲ್ಲಿ 83,831, ಹಾವೇರಿಯಲ್ಲಿ 77,677,ಯಾದಗಿರಿ ಜಿಲ್ಲೆಯಲ್ಲಿ 74,953, ಬೆಂಗಳೂರು ಗ್ರಾ. ಜಿಲ್ಲೆ 48,865, ಗದಗದಲ್ಲಿ 55,880 ಹಾಗೂ ವಿಜಯನಗರ ಜಿಲ್ಲೆಯಲ್ಲಿ 2,45,352 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗುತ್ತೆ.

2007ರ ನಂತ್ರ ಹುಟ್ಟಿದವರು ಇಂದಿನಿಂದ ಲಸಿಕೆ ಪಡೆದುಕೊಳ್ಳಬಹುದು. ಎಲ್ಲಾ ಶಾಲಾ ಕಾಲೇಜುಗಳಲ್ಲಿ ಲಸಿಕಾ ಕೇಂದ್ರಗಳಲ್ಲಿ ವ್ಯಾಕ್ಸಿನ್ ಡ್ರೈವ್ ನಡೆಯಲಿದ್ದು, ನೋಂದಣಿ ಮಾಡಿಕೊಂಡು ವ್ಯಾಕ್ಸಿನ್ ಪಡೆದುಕೊಳ್ಳಬಹುದಾಗಿದೆ.

ಇದನ್ನೂ ಓದಿ: ದೇಶದಲ್ಲಿ ಇಂದಿನಿಂದ ಹೊಸ ಹಂತದ ಲಸಿಕೆ ಅಭಿಯಾನ; 15-18 ವರ್ಷದವರಿಗೆ ಕೊವ್ಯಾಕ್ಸಿನ್ ವ್ಯಾಕ್ಸಿನ್​​ ನೀಡಿಕೆ ಪ್ರಾರಂಭ

Published On - 8:03 am, Mon, 3 January 22

ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?