‘ಫ್ರೀ ಕಾಶ್ಮೀರ’ ಅನ್ನೋದರಲ್ಲಿ ತಪ್ಪೇನಿದೆ? ವಕೀಲರ ವಿರುದ್ಧ ಸಿದ್ದರಾಮಯ್ಯ ಕಿಡಿ
ಮೈಸೂರು: ನಳಿನಿ ಎಂಬ ಕಾಲೇಜು ವಿದ್ಯಾರ್ಥಿನಿ ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶಿಸಿದ್ದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ತೆಗೆದುಕೊಂಡಿರುವ ನಿರ್ಧಾರ ಅಸಂವಿಧಾನಿಕವಾಗುದೆ ಎಂದು ಸಿದ್ದರಾಮಯ್ಯ ಜರಿದಿದ್ದಾರೆ. ಇಂತಹ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ. ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ. ಅದರಿಂದ ಮುಕ್ತಗೊಳಸಬೇಕೆಂಬ ಭಾವನೆಯಿಂದ ನಳಿನಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದಾಳೆ. […]
ಮೈಸೂರು: ನಳಿನಿ ಎಂಬ ಕಾಲೇಜು ವಿದ್ಯಾರ್ಥಿನಿ ‘ಫ್ರೀ ಕಾಶ್ಮೀರ’ ಪ್ಲೇ ಕಾರ್ಡ್ ಪ್ರದರ್ಶಿಸಿದ್ದನ್ನ ಮಾಜಿ ಸಿಎಂ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ಇದೇ ವೇಳೆ, ನಳಿನಿ ಪರ ವಕಾಲತ್ತು ವಹಿಸದಂತೆ ಮೈಸೂರು ವಕೀಲರ ಸಂಘ ತೆಗೆದುಕೊಂಡಿರುವ ನಿರ್ಧಾರ ಅಸಂವಿಧಾನಿಕವಾಗುದೆ ಎಂದು ಸಿದ್ದರಾಮಯ್ಯ ಜರಿದಿದ್ದಾರೆ.
ಇಂತಹ ನಿರ್ಧಾರ ತೆಗೆದುಕೊಳ್ಳಲು ವಕೀಲರ ಸಂಘಕ್ಕೆ ಅವಕಾಶವೇ ಇಲ್ಲ. ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಪ್ರದರ್ಶಿಸಿದ್ದು ದೇಶ ದ್ರೋಹದ ಕೆಲಸವಲ್ಲ. ಕಾಶ್ಮೀರದಲ್ಲಿ ಇಂದಿಗೂ ತುರ್ತುಸ್ಥಿತಿ ಇದೆ. ಅದರಿಂದ ಮುಕ್ತಗೊಳಸಬೇಕೆಂಬ ಭಾವನೆಯಿಂದ ನಳಿನಿ ಪ್ಲೇ ಕಾರ್ಡ್ ಪ್ರದರ್ಶಿಸಿದ್ದಾಳೆ. ಇದರ ವಿರುದ್ದ ಮೈಸೂರು ವಕೀಲರ ಸಂಘ ವಕಾಲತ್ತು ಹಾಕದೆ ನಿರ್ಣಯ ಕೈಗೊಂಡಿರುವುದು ಸರಿಯಲ್ಲ. ಇದನ್ನು ನಾನು ಖಂಡಿಸುತ್ತೇನೆ ಎಂದು ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.