AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ram Temple Construction Fund ರಾಮಮಂದಿರ ನಿರ್ಮಾಣ ನಿಧಿ ಅಭಿಯಾನಕ್ಕೆ ಆಂಜನೇಯ ದೇಗುಲದಲ್ಲಿ ನಟ ಅಭಿಷೇಕ್ ಚಾಲನೆ

ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಮೈಸೂರಿನಲ್ಲಿ ನಟ ಅಭಿಷೇಕ್ ಅಂಬರೀಶ್ ಚಾಲನೆ ನೀಡಿದ್ದಾರೆ.

Ram Temple Construction Fund ರಾಮಮಂದಿರ ನಿರ್ಮಾಣ ನಿಧಿ ಅಭಿಯಾನಕ್ಕೆ ಆಂಜನೇಯ ದೇಗುಲದಲ್ಲಿ ನಟ ಅಭಿಷೇಕ್ ಚಾಲನೆ
ನಟ ಅಭಿಷೇಕ್ ಅಂಬರೀಶ್
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jan 15, 2021 | 12:40 PM

Share

ಮೈಸೂರು: ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಮೈಸೂರಿನಲ್ಲಿ ನಟ ಅಭಿಷೇಕ್ ಅಂಬರೀಶ್ ಚಾಲನೆ ನೀಡಿದ್ದಾರೆ. ನಗರದ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿದ ಬಳಿಕ ಚೆಕ್ ನೀಡಿ ಅಭಿಯಾನಕ್ಕೆ ಚಾಲನೆ ನೀಡಿದ್ರು.

ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಸಿದ್ಧವಾಗಿದೆ. ಈ ಹಿನ್ನೆಲೆಯಲ್ಲಿ ಇಂದಿನಿಂದ ಫೆಬ್ರವರಿ 5ರವರೆಗೆ ದೇಣಿಗೆ ಸಂಗ್ರಹಿಸಲು ತೀರ್ಮಾನಿಸಲಾಗಿದೆ. ಹೀಗಾಗಿ ದೇಶದ 11 ಕೋಟಿ ಹಿಂದೂಗಳ ಮನೆಯಿಂದ ದೇಣಿಗೆ ಸಂಗ್ರಹ ಮಾಡಲಾಗುತ್ತಿದೆ. ರಾಮ ಜನ್ಮಭೂಮಿ‌ ತೀರ್ಥಕ್ಷೇತ್ರ ಟ್ರಸ್ಟ್​ನಿಂದ ದೇಶದ 4 ಲಕ್ಷ ಹಳ್ಳಿಗಳಲ್ಲಿ ದೇಣಿಗೆ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ.

ಈ ನಿಟ್ಟಿನಲ್ಲಿ ಅರಮನೆ ನಗರಿ ಮೈಸೂರಿನಲ್ಲೂ ದೇಣಿಗೆ ಸಂಗ್ರಹಿಸಲಾಗುತ್ತಿದ್ದು ಇಂದು ನಟ ಅಭಿಷೇಕ್ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ ರಾಮಮಂದಿರ ನಿರ್ಮಾಣ ನಿಧಿ ಸಮರ್ಪಣಾ ಅಭಿಯಾನಕ್ಕೆ ಚಾಲನೆ ನೀಡಿದ್ರು. ಈ ವೇಳೆ ಬಿಜೆಪಿ ನಗರಾಧ್ಯಕ್ಷ ಶ್ರೀವತ್ಸ, ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ಸದಸ್ಯರು ಭಾಗಿಯಾಗಿದ್ರು.

ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು ಕಾರ್ಯಕ್ರಮದ ವೇಳೆ ಅಭಿಷೇಕ್ ಅಂಬರೀಶ್ ಜತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಕಾತುರರಾಗಿದ್ದರು. ನಿಧಿ ಅಭಿಯಾನಕ್ಕೆ ಚಾಲನೆ ನೀಡಿ ಹೊರಡುವ ವೇಳೆ ಅಭಿಷೇಕ್ ಜೊತೆ ಸೆಲ್ಫಿ ತೆಗೆಸಿಕೊಳ್ಳಲು ಅಭಿಮಾನಿಗಳು ಮುಗಿಬಿದ್ದಿದ್ದರು. ಹಾಗೂ ನಟನನ್ನು ಮುತ್ತಿಗೆ ಹಾಕಿದ್ದರು. ಬಳಿಕ ಅಭಿಷೇಕ್ ಅಭಿಮಾನಿಗಳ ಜೊತೆ ಸಂಯಮದಿಂದ ವರ್ತಿಸಿ ಸ್ವತಃ ತಾವೇ ಅಭಿಮಾನಿಯ ಫೋನ್​ನಲ್ಲಿ ಸೆಲ್ಫಿ ಕ್ಲಿಕ್ಕಿಸಿಕೊಟ್ರು. ಅಭಿಮಾನಿಗಳಿಗೆ ಸೆಲ್ಫಿ ನೀಡಿ ನಂತರ ತೆರಳಿದ್ರು.

ಅಂಬಿ ಹುಟ್ಟುಹಬ್ಬಕ್ಕೆ ಅಭಿಷೇಕ್-ಸೂರಿ ‘ಬ್ಯಾಡ್ ಮ್ಯಾನರ್ಸ್’

Published On - 12:40 pm, Fri, 15 January 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ