ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಕೇಸ್ ದಾಖಲು, BBMP ಎಚ್ಚರಿಕೆ
ಬೆಂಗಳೂರು: ಕೊರೊನಾ ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ. ಈ ಕಾರಣದಿಂದಾಗಿ ಗಣೇಶ ಮೂರ್ತಿಯನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಅವಕಾಶವನ್ನು ಬಿಬಿಎಂಪಿ ನಿಷೇಧಿಸಿದೆ. ದೇಶದಲ್ಲಿ ಕೊರೊನಾ ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ಆಡಳಿತ ಸರ್ಕಾರವು ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನ ಸೇರುವ ಹಬ್ಬಗಳನ್ನು ವಿಜೃಂಭಣೆಯಿಂದ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಇಂದು ನಗರದಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದಂತೆ […]
ಬೆಂಗಳೂರು: ಕೊರೊನಾ ದೇಶದಲ್ಲಿ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಕಾರ್ಯಕ್ರಮಗಳಿಗೆ ಅವಕಾಶ ನೀಡಬಾರದೆಂದು ಕೇಂದ್ರ ಸರ್ಕಾರ ಸ್ಪಷ್ಟ ಆದೇಶ ಹೊರಡಿಸಿದೆ.
ಈ ಕಾರಣದಿಂದಾಗಿ ಗಣೇಶ ಮೂರ್ತಿಯನ್ನು ಸಾರ್ವಜನಿಕವಾಗಿ ಪ್ರತಿಷ್ಠಾಪನೆ ಮಾಡುವ ಅವಕಾಶವನ್ನು ಬಿಬಿಎಂಪಿ ನಿಷೇಧಿಸಿದೆ. ದೇಶದಲ್ಲಿ ಕೊರೊನಾ ದಿನೇ ದಿನೇ ಹೆಚ್ಚುತ್ತಿರುವ ಕಾರಣದಿಂದಾಗಿ ಆಡಳಿತ ಸರ್ಕಾರವು ಸಾರ್ವಜನಿಕ ಕಾರ್ಯಕ್ರಮಗಳು ಹಾಗೂ ಹೆಚ್ಚು ಜನ ಸೇರುವ ಹಬ್ಬಗಳನ್ನು ವಿಜೃಂಭಣೆಯಿಂದ ಮಾಡದಿರಲು ನಿರ್ಧರಿಸಿದೆ. ಹೀಗಾಗಿ ಇಂದು ನಗರದಲ್ಲಿ ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಸಾರ್ವಜನಿಕವಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪನೆ ಮಾಡದಂತೆ ನಿಷೇಧ ಹೇರಿದ್ದಾರೆ.
ಒಂದು ವೇಳೆ ಬಿಬಿಎಂಪಿ ಆದೇಶ ಉಲ್ಲಂಘಿಸಿ ಯಾರಾದರೂ ಸಾರ್ವಜನಿಕ ಸ್ಥಳದಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡಿದರೆ ಅವರನ್ನು ವಿಪತ್ತು ನಿರ್ವಹಣಾ ಕಾಯ್ದೆ ಅಡಿ ಕೇಸ್ ಹಾಕಿ, ಕ್ರಮ ಜರುಗಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ನೀಡಿದ್ದಾರೆ.
ಜೊತೆಗೆ ಗಣೇಶ ವಿಸರ್ಜನೆಗೆ ಬಿಬಿಎಂಪಿ ವತಿಯಿಂದ ಯಾವುದೇ ಟ್ಯಾಂಕುಗಳ ವ್ಯವಸ್ಥೆ ಮಾಡಲಾಗುವುದಿಲ್ಲ, ಮತ್ತು ಕೆರೆಗಳಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಅವಕಾಶವಿರುವುದಿಲ್ಲ. ಹಾಗಾಗಿ ಎಲ್ಲರೂ ಮನೆಯಲ್ಲಿಯೇ ಗಣೇಶ ಮೂರ್ತಿಯ ವಿಸರ್ಜನೆಗೆ ತಯಾರಿ ಮಾಡಿಕೊಂಡಿರಬೇಕೆಂದು ವಿನಂತಿಸಿದ್ದಾರೆ.