ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. 2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ […]

ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ
Follow us
ಪೃಥ್ವಿಶಂಕರ
|

Updated on:Nov 13, 2020 | 2:05 PM

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.

2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ ಮಹೇಶ್ ಶಿವನ್ನಗೋಳ ಹಾಗೂ ಬೈಲಹೊಂಗಲದ ಸೋಮಶೇಖರ್ ಶಹಾಪೂರ್ ಎಂಬುವವರು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಮಾಡಿರುವುದು ಸಾಬೀತಾಗಿತ್ತು.

ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಹೋಗಿದ್ದ ಯುವತಿ.. ಹೀಗಾಗಿ, ಈ 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ. ನ್ಯಾ.ಎಲ್.ವ್ಹಿ.ಪಾಟೀಲ್ ಸರ್ಕಾರಿ ವಿಶೇಷ ಅಭಿಯೋಜಕರಾಗಿ ವಾದ ಮಂಡಿಸಿದ್ದರು. ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಯುವತಿ ಹೋಗಿದ್ದ ವೇಳೆ ಯುವತಿಯ ಸ್ನೇಹಿತನ ಮೇಲೆ ಹಲ್ಲೆಗೈದಿದ್ದ ಯುವಕರ ಗುಂಪು ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ದುರುಳರ ಮೇಲೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

Published On - 1:43 pm, Fri, 13 November 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಮಾಧ್ಯಮದವರನ್ನು ಯಾಕೆ ಆಹ್ವಾನಿಸಿಲ್ಲ ಎಂದು ಜಾರಕಿಹೊಳಿಯನ್ನು ಕೇಳಬೇಕು: ಸಿಎಂ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ