ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ. 2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ […]

ಬೆಳಗಾವಿ ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್: ಐವರಿಗೆ ಜೀವಾವಧಿ ಶಿಕ್ಷೆ

Updated on: Nov 13, 2020 | 2:05 PM

ಬೆಳಗಾವಿ: ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ ವಿಧಿಸಿ ಜಿಲ್ಲಾ 3ನೇ ಸತ್ರ ಮತ್ತು ಪೋಕ್ಸೋ ನ್ಯಾಯಾಲಯ ಆದೇಶ ಹೊರಡಿಸಿದೆ.

2017ರ ಫೆಬ್ರವರಿ 15 ರಂದು ಅಪ್ರಾಪ್ತ ವಯಸ್ಸಿನ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ನಡೆದಿತ್ತು. ಜಿಲ್ಲೆಯ ಕಾಕತಿ ಠಾಣಾ ವ್ಯಾಪ್ತಿಯಲ್ಲಿ ಈ ಹೀನ ಕೃತ್ಯ ನಡೆದಿತ್ತು. ಮುತ್ಯಾನಟ್ಟಿ ಗ್ರಾಮದ ಸಂಜು ದಡ್ಡಿ, ಸುರೇಶ್ ಬೆಳಗಾವಿ, ಸುನೀಲ್ ಡುಮ್ಮಗೋಳ, ಮನಗುತ್ತಿಯ ಮಹೇಶ್ ಶಿವನ್ನಗೋಳ ಹಾಗೂ ಬೈಲಹೊಂಗಲದ ಸೋಮಶೇಖರ್ ಶಹಾಪೂರ್ ಎಂಬುವವರು ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಗ್ಯಾಂಗ್‌ರೇಪ್ ಮಾಡಿರುವುದು ಸಾಬೀತಾಗಿತ್ತು.

ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಹೋಗಿದ್ದ ಯುವತಿ..
ಹೀಗಾಗಿ, ಈ 5 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಜೊತೆಗೆ ಐದು ಲಕ್ಷಕ್ಕೂ ಹೆಚ್ಚು ದಂಡ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ. ನ್ಯಾ.ಎಲ್.ವ್ಹಿ.ಪಾಟೀಲ್ ಸರ್ಕಾರಿ ವಿಶೇಷ ಅಭಿಯೋಜಕರಾಗಿ ವಾದ ಮಂಡಿಸಿದ್ದರು. ಸ್ನೇಹಿತನ ಜೊತೆ ಕಾಕತಿ ಠಾಣಾ ವ್ಯಾಪ್ತಿಯ ಗುಡ್ಡಕ್ಕೆ ಯುವತಿ ಹೋಗಿದ್ದ ವೇಳೆ ಯುವತಿಯ ಸ್ನೇಹಿತನ ಮೇಲೆ ಹಲ್ಲೆಗೈದಿದ್ದ ಯುವಕರ ಗುಂಪು ಬಳಿಕ ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದರು. ಈ ದುರುಳರ ಮೇಲೆ ಕಾಕತಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾಗಿತ್ತು.

Published On - 1:43 pm, Fri, 13 November 20

ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Loading...
Unable to load recommendations.
Follow Us