ಬಳ್ಳಾರಿಯಲ್ಲಿ ಗುಂಪು ಘರ್ಷಣೆ: ಸಿಕ್ಕಿ ಸಿಕ್ಕವರ ಮೇಲೆ ದೊಣ್ಣೆಯಿಂದ ಹಲ್ಲೆ
ಬಳ್ಳಾರಿ: ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ದೊಣ್ಣೆಯಿಂದ ಸಿಕ್ಕಿ ಸಿಕ್ಕವರ ಮೇಲೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿಯ ಬಾಪೂಜಿ ನಗರದ ಸರ್ಕಲ್ ಬಳಿ ನಡೆದಿದೆ. ಗುಂಪು ಘರ್ಷಣೆಯಲ್ಲಿ ಹತ್ತಾರು ವಾಹನಗಳು ಜಖಂ ಆಗಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತವಾತರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗಲಾಟೆ ಮಾಡುತ್ತಿರುವ ಕೆಲ ದೃಶ್ಯಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ […]
ಬಳ್ಳಾರಿ: ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ಆರಂಭವಾಗಿ ದೊಣ್ಣೆಯಿಂದ ಸಿಕ್ಕಿ ಸಿಕ್ಕವರ ಮೇಲೆ ಹಲ್ಲೆ ಮಾಡಿರುವ ಘಟನೆ ಬಳ್ಳಾರಿಯ ಬಾಪೂಜಿ ನಗರದ ಸರ್ಕಲ್ ಬಳಿ ನಡೆದಿದೆ.
ಗುಂಪು ಘರ್ಷಣೆಯಲ್ಲಿ ಹತ್ತಾರು ವಾಹನಗಳು ಜಖಂ ಆಗಿದ್ದು, 20ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದೆ. ಸ್ಥಳದಲ್ಲಿ ಕೆಲಕಾಲ ಬಿಗುವಿನ ವಾತವಾತರಣ ನಿರ್ಮಾಣವಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.
ಗಲಾಟೆ ಮಾಡುತ್ತಿರುವ ಕೆಲ ದೃಶ್ಯಗಳು ಸಿಸಿ ಕ್ಯಾಮಾರದಲ್ಲಿ ಸೆರೆಯಾಗಿದೆ. ಬ್ರೂಸ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ತನಿಖೆ ಕೈಗೊಂಡಿದ್ದಾರೆ.