ಶಾಲಾ ಸ್ಥಿತಿಗತಿ ಅರಿಯಲು ಮೊದಲ ಬಾರಿಗೆ BEO ವಾಸ್ತವ್ಯ!

ಕೊಪ್ಪಳ: ಗ್ರಾಮದ ಸಮಸ್ಯೆಗಳನ್ನು ಖುದ್ದಾಗಿ ಅರಿಯಲು ತಮ್ಮ ಅಧಿಕಾರದ ಅವಧಿಯಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರು. ಹಾಗೆಯೇ ಶಾಲಾ ಸ್ಥಿತಿಗತಿಗಳನ್ನು ತಿಳಿಯಲು ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಶಾಲಾ ವಾಸ್ತವ್ಯ ಹೂಡಿದ್ದರು. ಇದೀಗ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯದಿಂದ ಪ್ರೇರಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಸಹ ಶಾಲಾ ವಾಸ್ತವ್ಯ ಮಾಡಿದ್ದಾರೆ. ಗಂಗಾವತಿ ತಾಲೂಕಿನ ಈಳಿಗನೂರು ಗ್ರಾಮದ ಶಾಲೆಯಲ್ಲಿ ಬಿಇಒ ಸೋಮಶೇಖರಗೌಡ ತಡರಾತ್ರಿ ವಾಸ್ತವ್ಯ ಹೂಡಿದ್ದರು. ವಾಸ್ತವ್ಯದ ಪೂರ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳೊಂದಿಗೆ ಜಾಗೃತಿ ಗೀತೆಗಳನ್ನು ಹಾಡುತ್ತಾ […]

ಶಾಲಾ ಸ್ಥಿತಿಗತಿ ಅರಿಯಲು ಮೊದಲ ಬಾರಿಗೆ BEO ವಾಸ್ತವ್ಯ!
ಸಾಧು ಶ್ರೀನಾಥ್​

Updated on: Feb 15, 2020 | 11:03 AM

ಕೊಪ್ಪಳ: ಗ್ರಾಮದ ಸಮಸ್ಯೆಗಳನ್ನು ಖುದ್ದಾಗಿ ಅರಿಯಲು ತಮ್ಮ ಅಧಿಕಾರದ ಅವಧಿಯಲ್ಲಿ ಹೆಚ್​.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮಾಡಿದ್ದರು. ಹಾಗೆಯೇ ಶಾಲಾ ಸ್ಥಿತಿಗತಿಗಳನ್ನು ತಿಳಿಯಲು ಇತ್ತೀಚೆಗಷ್ಟೇ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಹ ಶಾಲಾ ವಾಸ್ತವ್ಯ ಹೂಡಿದ್ದರು. ಇದೀಗ ಶಿಕ್ಷಣ ಸಚಿವರ ಶಾಲಾ ವಾಸ್ತವ್ಯದಿಂದ ಪ್ರೇರಣೆಗೊಂಡ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಸಹ ಶಾಲಾ ವಾಸ್ತವ್ಯ ಮಾಡಿದ್ದಾರೆ.

ಗಂಗಾವತಿ ತಾಲೂಕಿನ ಈಳಿಗನೂರು ಗ್ರಾಮದ ಶಾಲೆಯಲ್ಲಿ ಬಿಇಒ ಸೋಮಶೇಖರಗೌಡ ತಡರಾತ್ರಿ ವಾಸ್ತವ್ಯ ಹೂಡಿದ್ದರು. ವಾಸ್ತವ್ಯದ ಪೂರ್ವದಲ್ಲಿ ಗ್ರಾಮದ ವಿದ್ಯಾರ್ಥಿಗಳೊಂದಿಗೆ ಜಾಗೃತಿ ಗೀತೆಗಳನ್ನು ಹಾಡುತ್ತಾ ಮೆರವಣಿಗೆ ಸಾಗಿ, ಬಳಿಕ ಶಾಲೆಯಲ್ಲಿ ವಾಸ್ತವ್ಯ ಮಾಡಿದರು. ಬಿಇಒ ಸೋಮಶೇಖರಗೌಡಗೆ ಶಾಲಾ ಶಿಕ್ಷಕರು, ಗ್ರಾಮಸ್ಥರು ಸಾಥ್ ನೀಡಿದರು. ಈ ಮೂಲಕ ರಾಜ್ಯದಲ್ಲಿಯೇ ಶಾಲಾ ವಾಸ್ತವ್ಯ ಮಾಡಿದ ಮೊದಲ ಬಿಇಒ ಎಂಬ ಹೆಗ್ಗಳಿಕೆಗೆ ಪಾತ್ರರಾದರು.




ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us