ಸಿಲಿಕಾನ್ ಸಿಟಿಯಲ್ಲಿ ವರುಣಾರ್ಭಟ: ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಬಡಾವಣೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ. ಇತ್ತ, ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾರಿ ಮಳೆಯಿಂದ ಭಾಗಶಃ ಕುಸಿದಿದೆ. ಜೊತೆಗೆ, ದೇಗುಲದ ಒಳ ಆವರಣ ಗೋಡೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಳೆರಾಯನ ಆರ್ಭಟ ತುಸು ಜೋರಾಗಿಯೇ ಇದೆ. ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದ ನಗರದ ಹಲವು ಬಡಾವಣೆಗಳಲ್ಲಿ ಜನ ತತ್ತರಿಸಿ ಹೋಗಿದ್ದಾರೆ.
ಇತ್ತ, ನಿನ್ನೆ ರಾತ್ರಿ ಸುರಿದ ಭಾರಿ ಮಳೆಗೆ ನಗರದ ಇತಿಹಾಸ ಪ್ರಸಿದ್ಧ ಗವಿ ಗಂಗಾಧರೇಶ್ವರ ದೇವಸ್ಥಾನದ ಬಳಿ ಗೋಡೆ ಕುಸಿತ ಸಂಭವಿಸಿದೆ. ಗವಿಪುರಂ ಗುಟ್ಟಹಳ್ಳಿಯಲ್ಲಿರುವ ದೇವಸ್ಥಾನದ ಗೋಡೆ ಭಾರಿ ಮಳೆಯಿಂದ ಭಾಗಶಃ ಕುಸಿದಿದೆ. ಜೊತೆಗೆ, ದೇಗುಲದ ಒಳ ಆವರಣ ಗೋಡೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ.