ದೇವಸ್ಥಾನದ 6 ಸಿಬ್ಬಂದಿಗೆ ಕೊರೊನಾ, ಘಾಟಿ ಸುಬ್ರಹ್ಮಣ್ಯನಿಗೂ 48 ಗಂಟೆಗಳ ದಿಗ್ಬಂಧನ

ದೇವನಹಳ್ಳಿ: ದೇಗುಲದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಘಾಟಿ ಸುಬ್ರಹ್ಮಣ್ಯ ದೇವಾಲಯ ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ‌ ಕೆಲಸ ಮಾಡುವ 6 ಜನರಿಗೆ ಕೊರೊನಾ ವಕ್ಕರಿಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ 48 ಗಂಟೆಗಳ‌ ಕಾಲ ಅಂದ್ರೆ ಎರಡು ದಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬಂದ್ ಮಾಡಲಾಗಿದೆ. ದೇವಸ್ಥಾನದ ಸಿಬ್ಬಂದಿಗೆ ನೆನ್ನೆ ಸಂಜೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಎಲ್ಲಾ ಮುಂಜಾಗ್ರತಾ […]

ದೇವಸ್ಥಾನದ 6 ಸಿಬ್ಬಂದಿಗೆ ಕೊರೊನಾ, ಘಾಟಿ ಸುಬ್ರಹ್ಮಣ್ಯನಿಗೂ 48 ಗಂಟೆಗಳ ದಿಗ್ಬಂಧನ

Updated on: Oct 22, 2020 | 10:40 AM

ದೇವನಹಳ್ಳಿ: ದೇಗುಲದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೊನಾ ಹಿನ್ನೆಲೆಯಲ್ಲಿ 48 ಗಂಟೆಗಳ ಕಾಲ ಘಾಟಿ ಸುಬ್ರಹ್ಮಣ್ಯ ದೇವಾಲಯ ಬಂದ್ ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ‌ ಕೆಲಸ ಮಾಡುವ 6 ಜನರಿಗೆ ಕೊರೊನಾ ವಕ್ಕರಿಸಿದೆ.

ಕೊರೊನಾ ಸೋಂಕು ಹಿನ್ನೆಲೆಯಲ್ಲಿ 48 ಗಂಟೆಗಳ‌ ಕಾಲ ಅಂದ್ರೆ ಎರಡು ದಿನ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬಂದ್ ಮಾಡಲಾಗಿದೆ. ದೇವಸ್ಥಾನದ ಸಿಬ್ಬಂದಿಗೆ ನೆನ್ನೆ ಸಂಜೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭಕ್ತರು ದೇವಸ್ಥಾನಕ್ಕೆ ಆಗಮಿಸದಂತೆ ಅಧಿಕಾರಿಗಳು ಮನವಿ ಮಾಡಿಕೊಂಡಿದ್ದಾರೆ.