ರಸ್ತೆ ದಾಟುವಾಗ ಬೈಕ್ ಡಿಕ್ಕಿ, ಬಾಲಕಿ ಬಲಿ: ಸಿಸಿಟಿವಿಯಲ್ಲಿ‌ ಭೀಕರ ದೃಶ್ಯ ಸೆರೆ

ದೇವನಹಳ್ಳಿ: ರಸ್ತೆ ದಾಟುತ್ತಿದ್ದ ಬಾಲಕಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬಾಲಕಿ ಬಲಿಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದಲ್ಲಿ ಮರಳುಬಾಗಿಲು ರಸ್ತೆಯಲ್ಲಿ ನಡೆದಿದೆ. ಕಳೆದ ತಿಂಗಳು 28 ನೇ ತಾರೀಕು ನಡೆದಿರೂ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಕಿ ಆಸ್ಪತ್ರೆ ಬಳಿಯಿಂದ ಅಂಗಡಿಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕೆಂಪೇಗೌಡ ವಿಮಾನ ನಿಲ್ಥಾಣ […]

ರಸ್ತೆ ದಾಟುವಾಗ ಬೈಕ್ ಡಿಕ್ಕಿ, ಬಾಲಕಿ ಬಲಿ: ಸಿಸಿಟಿವಿಯಲ್ಲಿ‌ ಭೀಕರ ದೃಶ್ಯ ಸೆರೆ

Updated on: Nov 07, 2020 | 9:56 AM

ದೇವನಹಳ್ಳಿ: ರಸ್ತೆ ದಾಟುತ್ತಿದ್ದ ಬಾಲಕಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಬಾಲಕಿ ಬಲಿಯಾಗಿರುವ ಘಟನೆ ದೇವನಹಳ್ಳಿ ಪಟ್ಟಣದಲ್ಲಿ ಮರಳುಬಾಗಿಲು ರಸ್ತೆಯಲ್ಲಿ ನಡೆದಿದೆ.

ಕಳೆದ ತಿಂಗಳು 28 ನೇ ತಾರೀಕು ನಡೆದಿರೂ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ‌ ಸೆರೆಯಾಗಿದ್ದು, ಘಟನೆಯ ಸಿಸಿಟಿವಿ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಾಲಕಿ ಆಸ್ಪತ್ರೆ ಬಳಿಯಿಂದ ಅಂಗಡಿಗೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.

ಕೆಂಪೇಗೌಡ ವಿಮಾನ ನಿಲ್ಥಾಣ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದ್ದು, ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.


Published On - 9:54 am, Sat, 7 November 20