ಮನೆಯ ಮೇಲ್ಛಾವಣಿ ಕುಸಿದು ಬಾಲಕಿ ದುರ್ಮರಣ, ಯಾವೂರಲ್ಲಿ?

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಬಾಲಕಿಯೊಬ್ಬಳು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ 11 ವರ್ಷದ ಬಾಲಕಿ ಮರೆವ್ವ ಬಿಜ್ಜೂರ್ ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಮತ್ತೋರ್ವ ಬಾಲಕಿ ರೇಖಾ ಲೋಟಗೇರಿಯ ತಲೆ ಮತ್ತು ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸ್ಥಳಕ್ಕೆ ಮುದ್ದೇಬಿಹಾಳ ತಹಶೀಲ್ದಾರ್ GS ಮಳಗಿ ಮತ್ತು ಕಂದಾಯ ನಿರೀಕ್ಷಕ SB ಮಾವಿನಮಟ್ಟಿ ಭೇಟಿಕೊಟ್ಟು ಪರಿಶೀಲನೆ ನಡೆಸಿದರು. ಮುದ್ದೇಬಿಹಾಳ ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಚವನಬಾವಿಯಲ್ಲಿ 12 ಮನೆಗಳು ಕುಸಿದಿವೆ. […]

ಮನೆಯ ಮೇಲ್ಛಾವಣಿ ಕುಸಿದು ಬಾಲಕಿ ದುರ್ಮರಣ, ಯಾವೂರಲ್ಲಿ?
KUSHAL V

|

Sep 27, 2020 | 2:31 PM

ವಿಜಯಪುರ: ಮನೆಯ ಮೇಲ್ಛಾವಣಿ ಕುಸಿದು ಬಾಲಕಿಯೊಬ್ಬಳು ಸಾವನ್ನಪ್ಪಿರೋ ಘಟನೆ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಡೊಂಕಮಡು ಗ್ರಾಮದಲ್ಲಿ ನಡೆದಿದೆ. ಅವಘಡದಲ್ಲಿ 11 ವರ್ಷದ ಬಾಲಕಿ ಮರೆವ್ವ ಬಿಜ್ಜೂರ್ ಮೃತಪಟ್ಟಿದ್ದಾಳೆ.

ಘಟನೆಯಲ್ಲಿ ಮತ್ತೋರ್ವ ಬಾಲಕಿ ರೇಖಾ ಲೋಟಗೇರಿಯ ತಲೆ ಮತ್ತು ಕಾಲಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಸ್ಥಳಕ್ಕೆ ಮುದ್ದೇಬಿಹಾಳ ತಹಶೀಲ್ದಾರ್ GS ಮಳಗಿ ಮತ್ತು ಕಂದಾಯ ನಿರೀಕ್ಷಕ SB ಮಾವಿನಮಟ್ಟಿ ಭೇಟಿಕೊಟ್ಟು ಪರಿಶೀಲನೆ ನಡೆಸಿದರು.

ಮುದ್ದೇಬಿಹಾಳ ತಾಲೂಕಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನೆಲೆಯಲ್ಲಿ ಚವನಬಾವಿಯಲ್ಲಿ 12 ಮನೆಗಳು ಕುಸಿದಿವೆ. ಜೊತೆಗೆ, ಹಲವು ಮನೆಗಳ ಗೋಡೆಗಳಲ್ಲಿ ಬಿರುಕು ಕಾಣಿಸಿಕೊಂಡಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada