ಮಂಡ್ಯ: ಕಬ್ಬು ಕಟಾವು ಮಾಡಲು ಬಂದಿದ್ದ ಬಾಲಕಿಯ ಮೇಲೆ ಅತ್ಯಾಚಾರ ಮಾಡಲು ಯತ್ನಿಸಿ, ಕತ್ತುಕೊಯ್ದು ಭೀಕರವಾಗಿ ಹತ್ಯೆ ಮಾಡಿದ ಘಟನೆ ಮದ್ದೂರಿನ ಹುರುಗಲವಾಡಿ ಗ್ರಾಮದಲ್ಲಿ ನಡೆದಿದೆ. ಆರತಿಬಾಯಿ (12) ಮೃತ ಬಾಲಕಿ.
ಈಕೆ ಬಳ್ಳಾರಿ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನವಳು. ಹುರಗಲವಾಡಿ ಗ್ರಾಮದ ರೈತ ಚೆಲುವರಾಜ್ ಎಂಬುವರ ಕಬ್ಬಿನಗದ್ದೆಯಲ್ಲಿ ಕಬ್ಬು ಕಟಾವು ಮಾಡಲು ಬಂದಿದ್ದಳು. ಈ ವೇಳೆ ವ್ಯಕ್ತಿಯೊಬ್ಬ ಬಾಲಕಿಯನ್ನು ಎಳೆದೊಯ್ದು, ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ನಂತರ ಕತ್ತುಕೊಯ್ದು ಭೀಕರವಾಗಿ ಹತ್ಯೆ ಮಾಡಿದ್ದಾನೆ. ಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.