ಬೆಳಗಾವಿ: ಬೆಳಗಾವಿ ಜಿಲ್ಲೆಯ ಗೋಕಾಕ್ ತಹಶೀಲ್ದಾರ್ ಕಚೇರಿ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆಯಲ್ಲಿ ತಹಶೀಲ್ದಾರ್ ಕಚೇರಿಯನ್ನ ಸೀಲ್‌ಡೌನ್ ಮಾಡಲಾಗಿದೆ.
ಗೋಕಾಕ್ ತಹಶೀಲ್ದಾರ್ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ 36 ವರ್ಷದ ಗ್ರಾಮ ಲೆಕ್ಕಾಧಿಕಾರಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದೆ. ಹೀಗಾಗಿ ಪಿ.28358ನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ, ಆತನೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 15ಜನರನ್ನ ಕ್ವಾರೆಂಟೈನ್ ಮಾಡಲಾಗಿದೆ.
ಗೋಕಾಕ್ ತಾಲೂಕಿನಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ ಜುಲೈ 13ರವರೆ ಗೋಕಾಕ್ ನಗರದಲ್ಲಿ ಸೀಮಿತ ಅವಧಿಗೆ, ಅಂದ್ರೆ ಬೆಳಗ್ಗೆ ಐದು ಗಂಟೆಯಿಂದ ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ವ್ಯಾಪಾರ ವಹಿವಾಟಿಗೆ ಅವಕಾಶ ಎಂದು ಆದೇಶಮಾಡಲಾಗಿದೆ. ಹಾಗೇನೇ ಮಧ್ಯಾಹ್ನ ಒಂದು ಗಂಟೆಯಿಂದ ಬೆಳಗ್ಗೆ ಐದರವರೆಗೆ ಷರತ್ತು ಬದ್ಧ ಲಾಕ್‌ಡೌನ್ ಜಾರಿಗೊಳಿಸಲಾಗಿದೆ.
Published On - 10:57 am, Thu, 9 July 20