Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! ಎಷ್ಟಿರಬಹುದು ದರ?

Gold Silver Rate in Bengaluru: ಚಿನ್ನದರ ನಿನ್ನೆಗಿಂತ ಕೊಂಚ ಏರಿಕೆಯತ್ತ ಮುಖ ಮಾಡಿದೆ. ಬೆಳ್ಳಿದವೂ ಕೊಂಚ ಏರಿಕೆ ಕಂಡಿದೆ. ಇಲ್ಲಿದೆ ಓದಿ ದರ ಎಷ್ಟಿರಬಹುದು ಎಂಬುದರ ವಿವರ.

Gold Silver Price: ಚಿನ್ನ, ಬೆಳ್ಳಿ ದರ ಕೊಂಚ ಏರಿಕೆ! ಎಷ್ಟಿರಬಹುದು ದರ?
ಸಾಂದರ್ಭಿಕ ಚಿತ್ರ
Follow us
|

Updated on: Mar 11, 2021 | 9:21 AM

ಬೆಂಗಳೂರು: ಚಿನ್ನ ಮತ್ತು ಬೆಳ್ಳಿ ದರ ಕೊಂಚ ಏರಿಕೆ ಕಂಡಿದೆ. 10 ಗ್ರಾಂ 22 ಕ್ಯಾರೆಟ್​ ಚಿನ್ನ ನಿನ್ನೆ 41,650 ರೂಪಾಯಿಗೆ ಮಾರಾಟವಾಗಿದ್ದು, ದೈನಂದಿನ ದರ ಬದಲಾವಣೆಯಲ್ಲಿ 150 ರೂಪಾಯಿ ಏರಿಕೆ ಕಂಡಿದೆ. ಇಂದಿನ ದರ 41,800 ರೂಪಾಯಿ ನಿಗದಿಯಾಗಿದೆ. 24 ಕ್ಯಾರೆಟ್​ 10 ಗ್ರಾಂ ಚಿನ್ನ ನಿನ್ನೆ 45,440 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 45,600 ರೂಪಾಯಿ ಇದೆ. ದೈನಂದಿನ ದರ ಬದಲಾವಣೆಯಲ್ಲಿ 160 ರೂಪಾಯಿ ಏರಿಕೆ ಕಂಡಿದೆ. 1ಕೆ.ಜಿ ಬೆಳ್ಳಿ ದರ ನಿನ್ನೆ 66,700 ರೂಪಾಯಿ ಇದ್ದು, ಇಂದಿನ ದರ 67,000 ರೂಪಾಯಿ ಆಗಿದೆ. ದೈನಂದಿನ ದರ ಪರಿಶೀಲಿಸಿದಾಗ ಸುಮಾರು 300 ರೂಪಾಯಿಯಷ್ಟು ದರ ಏರಿಕೆ ಕಂಡಿದೆ.

ಚಿನ್ನಾಭರಣ ಅಂದರೆ ಎಲ್ಲರಿಗೆ ಇಷ್ಟ. ಕೊಳ್ಳಲು ದುಬಾರಿಯಾದರೂ ಆಪ್ತ ಕಾಲದದಲ್ಲಿ ಸಹಾಯಕ್ಕೆ ಬರುವುದು ಚಿನ್ನ. ಹಣವಿದ್ದಾಗ ಚಿನ್ನ ಕೊಂಡು, ಹಣದ ಅವಶ್ಯಕತೆ ಬಿದ್ದಾಗ ಚಿನ್ನವನ್ನು ಮಾರಾಟ ಮಾಡಿ ಹಣ ಪಡೆಯುವುದು ಸಾಮಾನ್ಯ ಸಂಗತಿ. ಆದ್ದರಿಂದಲೇ ಚಿನ್ನವನ್ನು ಆಪ್ತ ಕಾಲದ ಬಂಧು ಎಂದು ಕರೆಯುತ್ತಾರೆ. ಹಿಂದಿನ ವರ್ಷಕ್ಕೆ ಚಿನ್ನ ದರವನ್ನು ಗಮನಿಸಿದರೆ ಚಿನ್ನ ದರ ಕುಸಿದಿದೆ. ಕಳೆದ ವರ್ಷ 50,000 ಗಡಿ ದಾಟಿದ್ದ ಚಿನ್ನ ಇದೀಗ 40, ಸಾವಿರದ ಆಸು-ಪಾಸಿನಲ್ಲಿದೆ. ಹೀಗಿದ್ದಾಗ ಚಿನ್ನ ಕೊಳ್ಳುವಷ್ಟು ಹಣವಿದ್ದರೆ ಕೊಳ್ಳುವುದು ಉತ್ತಮ. ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡಲು ಉತ್ತಮ ಸಮಯವೂ ಹೌದು ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.

22 ಕ್ಯಾರೆಟ್ ಚಿನ್ನ ದರ  1 ಗ್ರಾಂ ಚಿನ್ನ ದರ ನಿನ್ನೆ 4,165 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 4,180 ರೂಪಾಯಿಗೆ ಗ್ರಾಹಕರು ಕೊಳ್ಳುತ್ತಿದ್ದಾರೆ. 8 ಗ್ರಾಂ ಚಿನ್ನ ದರ ನಿನ್ನೆ 33,320 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 33,440 ರೂಪಾಯಿ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 120 ರೂಪಾಯಿ ಹೆಚ್ಚಳವಾಗಿದೆ. 10 ಗ್ರಾಂ ಚಿನ್ನ ದರ ನಿನ್ನೆ 41,650 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 41,800 ರೂಪಾಯಿಗೆ ನಿಗದಿಯಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 150 ರೂಪಾಯಿ ಏರಿಕೆ ಕಂಡಿದೆ. 100 ಗ್ರಾಂ ಚಿನ್ನ ದರ ನಿನ್ನೆ 4,16,500 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 4,18,000 ರೂಪಾಯಿಗೆ ಆಗಿದೆ.

24 ಕ್ಯಾರೆಟ್ ಚಿನ್ನ ದರ 1ಗ್ರಾಂ ಚಿನ್ನ ದರ ನಿನ್ನೆ 4,544 ರೂಪಾಯಿಗೆ ಮಾರಾಟವಾಗಿತ್ತು. ಇಂದಿನ ದರ 4,560 ರೂಪಾಯಿ ಆಗಿದೆ. ದರ ಬದಲಾವಣೆಯಲ್ಲಿ 16 ರೂಪಾಯಿಯಷ್ಟು ಏರಿಕೆ ಕಂಡಿದೆ. 8 ಗ್ರಾಂ ಚಿನ್ನ ದರ ನಿನ್ನೆ 36,352 ರೂಪಾಯಿಗೆ ಮಾರಾಟವಾಗಿತ್ತು. ಇಂದಿನ ದರ 36,480 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 128 ರೂಪಾಯಿ ಏರಿಕೆ ಕಂಡಿದೆ. 10 ಗ್ರಾಂ ಚಿನ್ನ ದರ ನಿನ್ನೆ 45,440 ರೂಪಾಯಿ ಇದ್ದು, ಇಂದಿನ ದರ 45,600 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 160 ರೂಪಾಯಿಯಷ್ಟು ಏರಿಕೆ ಕಂಡಿದೆ. ಹಾಗೂ 100 ಗ್ರಾಂ ಚಿನ್ನ ದರ ನಿನ್ನೆ 4,54,400 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 4,56,000 ರೂಪಾಯಿಗೆ ಮಾರಾಟವಾಗಿದೆ. ದೈನಂದಿನ ದರ ಬದಲಾವಣೆಯಲ್ಲಿ 1,600 ರೂಪಾಯಿ ಹೆಚ್ಚಳವಾಗಿದೆ.

ಬೆಳ್ಳಿ ದರ ಮಾಹಿತಿ

1ಗ್ರಾಂ ಬೆಳ್ಳಿ ದರ ನಿನ್ನೆ 66.70 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 67 ರೂಪಾಯಿ ಆಗಿದೆ. 8 ಗ್ರಾಂ ಬೆಳ್ಳಿ ದರ ನಿನ್ನೆ 533.60 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 536 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 2 ರೂಪಾಯಿಯಷ್ಟು ಏರಿಕೆ ಕಂಡಿದೆ. 10 ಗ್ರಾಂ ಬೆಳ್ಳಿ ದರ ನಿನ್ನೆ 667 ರೂಪಾಯಿಗೆ ಮಾರಾಟವಾಗಿದ್ದು, ಇಂದು ದರ 670 ರೂಪಾಯಿಗೆ ನಿಗದಿಯಾಗಿದೆ. ಸುಮಾರು 3 ರೂಪಾಯಿಯಷ್ಟು ಏರಿಕೆ ಕಂಡಿದೆ. 100 ಗ್ರಾಂ ಬೆಳ್ಳಿ ದರ ನಿನ್ನೆ 6,670 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 6,700 ರೂಪಾಯಿ ಆಗಿದೆ. ದೈನಂದಿನ ದರ ಬದಲಾವಣೆಯಲ್ಲಿ 30 ರೂಪಾಯಿಯಷ್ಟು ಏರಿಕೆ ಕಂಡಿದೆ. 1ಕೆ.ಜಿ ಬೆಳ್ಳಿ ದರ ನಿನ್ನೆ 66,700 ರೂಪಾಯಿಗೆ ಮಾರಾಟವಾಗಿದ್ದು, ಇಂದಿನ ದರ 67,000 ರೂಪಾಯಿಗೆ ಏರಿಕೆಯಾಗಿದೆ. ನಿನ್ನೆಗಿಂತ ಇಂದು 600 ರೂಪಾಯಿ ಏರಿಕೆ ಕಂಡಿದೆ.

ಇದನ್ನೂ ಓದಿ: Gold Silver Price: ಚಿನ್ನಾಭರಣ ದರ ಇಳಿಕೆ; ಬೆಳ್ಳಿ ದರ ಕೊಂಚ ಏರಿಕೆ! ಇಂದಿನ ದರ ಎಷ್ಟಿದೆ?

ಇದನ್ನೂ ಓದಿ: Gold Silver Price: ಚಿನ್ನ ಕೊಳ್ಳಲು ಉತ್ತಮ ಸಮಯ.. ಇಂದು ಎಷ್ಟಿದೆ ಗೊತ್ತಾ ಚಿನ್ನ ದರ?

ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ