ನಾಳೆ ವರಮಹಾಲಕ್ಷ್ಮಿ: ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಬಾಗಿಲು ತೆರೆಯುತ್ತಾರಾ?

| Updated By: ಆಯೇಷಾ ಬಾನು

Updated on: Jul 30, 2020 | 5:13 PM

ತುಮಕೂರು:ನಾಳೆ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಿಂದಾಗಿ ಕೆಲ ದಿನಗಳಿಂದ ಸೀಲ್ ಡೌನ್ ಮಾಡಲಾಗಿದ್ದ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯವನ್ನು ಸೀಲ್ ಡೌನ್ ಮುಕ್ತಗೊಳಿಸಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ. ಕೆಲವು ದಿನಗಳ ಹಿಂದೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಅರ್ಚಕರ ಮಡದಿಗೆ ಕೊರೊನಾ ಪಾಸಿಟಿವ್ ಆಗಿತ್ತು, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಆಡಳಿತ ಮಂಡಳಿಯಿಂದ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗಿತ್ತು. ಈಗ ಅರ್ಚಕರ ಪತ್ನಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ನಾಳೆ ದೇವಸ್ಥಾನವನ್ನು ಭಕ್ತಾದಿಗಳ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ. ಈಗಾಗಲೇ ದೇವಸ್ಥಾನವನ್ನು ಸಿಬ್ಬಂದಿಗಳು ಸ್ಯಾನಿಟೈಸ್ […]

ನಾಳೆ ವರಮಹಾಲಕ್ಷ್ಮಿ: ಗೊರವನಹಳ್ಳಿ ಮಹಾಲಕ್ಷ್ಮಿ ದೇಗುಲದ ಬಾಗಿಲು ತೆರೆಯುತ್ತಾರಾ?
Follow us on

ತುಮಕೂರು:ನಾಳೆ ವರಮಹಾಲಕ್ಷ್ಮಿ ಹಬ್ಬದ ಹಿನ್ನೆಲೆಯಿಂದಾಗಿ ಕೆಲ ದಿನಗಳಿಂದ ಸೀಲ್ ಡೌನ್ ಮಾಡಲಾಗಿದ್ದ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯವನ್ನು ಸೀಲ್ ಡೌನ್ ಮುಕ್ತಗೊಳಿಸಿ ಭಕ್ತರ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿದೆ.

ಕೆಲವು ದಿನಗಳ ಹಿಂದೆ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದ ಅರ್ಚಕರ ಮಡದಿಗೆ ಕೊರೊನಾ ಪಾಸಿಟಿವ್ ಆಗಿತ್ತು, ಮುಂಜಾಗ್ರತಾ ಕ್ರಮವಾಗಿ ದೇವಸ್ಥಾನದ ಆಡಳಿತ ಮಂಡಳಿಯಿಂದ ದೇವಸ್ಥಾನವನ್ನು ಸೀಲ್ ಡೌನ್ ಮಾಡಲಾಗಿತ್ತು. ಈಗ ಅರ್ಚಕರ ಪತ್ನಿ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ನಾಳೆ ದೇವಸ್ಥಾನವನ್ನು ಭಕ್ತಾದಿಗಳ ದರ್ಶನಕ್ಕೆ ಮುಕ್ತಗೊಳಿಸಲಾಗಿದೆ.

ಈಗಾಗಲೇ ದೇವಸ್ಥಾನವನ್ನು ಸಿಬ್ಬಂದಿಗಳು ಸ್ಯಾನಿಟೈಸ್ ಮಾಡಲಾಗಿದ್ದು, ದರ್ಶನಕ್ಕೆ ಬರುವ ಭಕ್ತರಿಗೆ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕೂಡ ಮಾಡಲಾಗಿದೆ. ಜೊತೆಗೆ ದರ್ಶನಕ್ಕೆ ಬರುವ ಭಕ್ತರು ಸಾಮಾಜಿಕ ಅಂತರ ಕಾಪಾಡಿಕೊಂಡು ದೇವಿಯ ದರ್ಶನ ಪಡೆಯಬೇಕೆಂದು ಆಡಳಿತ ಮಂಡಳಿ ಕೋರಿಕೊಂಡಿದೆ.

ಇದನ್ನೂ ಓದಿ: ಗೊರವನಹಳ್ಳಿ ಲಕ್ಷ್ಮೀ ದೇವಾಲಯ ಸೀಲ್​ಡೌನ್, ಕಾರಣವೇನು ಗೊತ್ತಾ?