ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿ, ಶಿಕ್ಷಕ ಸಾವು

ರಾಮಯ್ಯ ನಾಯಕ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಶಿಕ್ಷಕ ಮೃತಪಟ್ಟಿದ್ದಾರೆ.

ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿ, ಶಿಕ್ಷಕ ಸಾವು
ಸಾಂದರ್ಭಿಕ ಚಿತ್ರ
Ayesha Banu

|

Jan 05, 2021 | 8:36 AM

ರಾಯಚೂರು: ರಸ್ತೆ ಬದಿ ನಿಂತಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಜಿಲ್ಲೆಯ ಮಸ್ಕಿ ತಾಲೂಕಿನ ಗುಡದೂರು ಗ್ರಾಮದ ಬಳಿ ನಡೆದಿದೆ. ಉದ್ಬಾಳ ಸರ್ಕಾರಿ ಶಾಲೆ ಶಿಕ್ಷಕ ರಾಮಯ್ಯ ನಾಯಕ್ (35) ಮೃತ ದುರ್ದೈವಿ.

ರಾಮಯ್ಯ ನಾಯಕ್ ಚಲಾಯಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ನಿಂತಿದ್ದ ವಾಹನಕ್ಕೆ ಡಿಕ್ಕಿಯಾಗಿದೆ. ಈ ಪರಿಣಾಮ ಸ್ಥಳದಲ್ಲೇ ಶಿಕ್ಷಕ ಮೃತಪಟ್ಟಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಉದ್ಬಾಳ ಸರ್ಕಾರಿ ಶಾಲೆಯಲ್ಲಿ ನೀರವ ಮೌನ ಆವರಿಸಿದೆ. ಮಸ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸಾಲಬಾಧೆ: ಗ್ರಾ.ಪಂ ಮಾಜಿ ಸದಸ್ಯ, ಜೆಡಿಎಸ್​ ಮುಖಂಡನಾಗಿದ್ದ ರೈತ ನೇಣಿಗೆ ಶರಣು

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada