AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

72ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ

ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾರಿಂದ ಧ್ವಜಾರೋಹಣ ನೆರವೇರಿದೆ.

72ನೇ ಗಣರಾಜ್ಯೋತ್ಸವ ಸಂಭ್ರಮ: ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರಿಂದ ಧ್ವಜಾರೋಹಣ
ಆಯೇಷಾ ಬಾನು
ಆಯೇಷಾ ಬಾನು|

Updated on:Jan 26, 2021 | 10:16 AM

Share

ಬೆಂಗಳೂರು: 72ನೇ ಗಣರಾಜ್ಯೋತ್ಸವ ಆಚರಣೆ ಹಿನ್ನೆಲೆಯಲ್ಲಿ ನಗರದ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸಂಭ್ರಮ ಮನೆ ಮಾಡಿದೆ. ಕೊರೊನಾ ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ರಾಜ್ಯಪಾಲ ವಜುಭಾಯ್ ವಾಲಾರಿಂದ ಧ್ವಜಾರೋಹಣ ನೆರವೇರಿದೆ.

ಧ್ವಜಾರೋಹಣ ಬಳಿಕ ವಿ.ಆರ್.ವಾಲಾರು ರಾಜ್ಯದ ಜನತೆಯನ್ನು ಉದ್ದೇಶಿಸಿ ಭಾಷಣ ಮಾಡಿದ್ರು. ಈ ವೇಳೆ ಮಾತನಾಡಿದ ಅವರು “ರಾಜ್ಯದ ಜನತೆಗೆ ಗಣತಂತ್ರ ದಿನದ ಶುಭಾಶಯಗಳು. ಈ ವರ್ಷ ಸಾಕಷ್ಟು ಸವಾಲಿನ‌ ಮಧ್ಯೆ ರಾಜ್ಯ ಸರ್ಕಾರ ಕೊವಿಡ್ ನಿಯಂತ್ರಣಕ್ಕೆ ಕೆಲಸ ಮಾಡ್ತಿದೆ. ರಾಜ್ಯ ಸರ್ಕಾರ ಹಗಲಿರಳು ಕೆಲಸ ಮಾಡುತ್ತಿದೆ. ಮೋದಿ ದೂರದೃಷ್ಟಿಯಿಂದ ಆತ್ಮನಿರ್ಭರ ಭಾರತ ನಿರ್ಮಾಣವಾಗಿದೆ. ವಿಶ್ವದಲ್ಲೇ ಅತಿ ದೊಡ್ಡ ಲಸಿಕೆ ಅಭಿಯಾನ ಭಾರತದಲ್ಲಿ ಆಗಿದೆ. ಈ ಲಸಿಕಾ ಅಭಿಯಾನಕ್ಕೆ ನಾವು ಕೂಡ ಕೈಜೋಡಿಸಿದ್ದೇವೆ” ಎಂದರು.

ತೋಟಗಾರಿಕೆ ಕ್ಷೇತ್ರದಲ್ಲಿ 701 ಕೋಟಿ ಬಿಡುಗಡೆ ಮಾಡಲಾಗಿದೆ. 15905ಹೆಕ್ಟರ್ ಪ್ರದೇಶವನ್ನ ಆಧುನಿಕ ನೀರಾವರಿ ತರಲಾಗಿದೆ. ಪರಿಸರ ಸ್ನೇಹಿ‌ ಮಾದರಿಯಲ್ಲಿ ಹಬ್ಬಗಳ ಆಚರಣೆ, ಜನವರಿ 14 ರಿಂದ ಯಲಚೇನಹಳ್ಳಿಯಿಂದ ಸಿಲ್ಕ್ ಇನ್ಸ್ಟಿಟ್ಯೂಟ್ ವರೆಗೆ 6 ಕಿ.ಮಿ ಮೆಟ್ರೋ ಲೈನ್ ಲೋಕಾರ್ಪಣೆ ಮಾಡಿದ್ದೇವೆ. ಬೆಂಗಳೂರಿನಲ್ಲಿ 8015 ಕೋಟಿ ಅನುಮೋದಿತ ಮೊತ್ತದಲ್ಲಿ ಕೆರಗಳ ಸಂರಕ್ಷಣೆ ಮಾಡಿದ್ದೇವೆ. ಸ್ಮಾರ್ಟ್ ಸಿಟಿ ಯೋಜನೆಯಲ್ಲಿ ನಗರದ ರೂಪವನ್ನೇ ಬದಲಾಯಿಸಲಾಗ್ತಿದೆ. ಬಿಡಿದಿಯಲ್ಲಿ 210 ಕೋಟಿ ರೂಪಾಯಿಗಳ ವೆಚ್ಚದಲ್ಲಿ ತ್ಯಾಜ್ಯದಿಂದ ಇಂಧನ ಎಂಬ ಯೋಜನೆ ಮಾಡಿದ್ದೇವೆ. ಪೋಲಿಸ್ ಪಡೆಯಲ್ಲಿ ಮಹಿಳಾ ಮೀಸಲಾತಿ ಶೇಕಡಾ 25 ಕ್ಕೆ ಹೆಚ್ಚಳ ಮಾಡಿದ್ದೇವೆ. ಪೋಲಿಸ್ ಇಲಾಖೆ ಗೃಹ ನಿರ್ಮಾಣಕ್ಕೆ 10000ವಸತಿ ಗೃಹಗಳ ನಿರ್ಮಾಣ ಮಾಡಲಾಗುತ್ತಿದೆ ಎಂದು ಯೋಜನೆ ಬಗ್ಗೆ ವಿವರಿಸಿದ್ರು.

ಫೆಬ್ರವರಿಯಿಂದ ಬೀದರ್ ಏರ್‌ಪೋರ್ಟ್‌ ಕಾರ್ಯಾರಂಭ ಫೆಬ್ರವರಿಯಿಂದ ಬೀದರ್ ಏರ್‌ಪೋರ್ಟ್‌ ಕಾರ್ಯಾರಂಭಗೊಳ್ಳಲಿದೆ. ಖಜಾನೆ 2 ಯೋಜನೆ ಮೂಲಕ ಜನರು ಆನ್‌ಲೈನ್ ಮೂಲಕ ತೆರಿಗೆಯನ್ನು ಪಾವತಿಸಬಹುದು. ರಾಜ್ಯ ಜೈವಿಕ ಆರ್ಥಿಕತೆ 22.6 ಬಿಲಿಯನ್ ಅಮೆರಿಕನ್ ಡಾಲರ್ ಹಾಗೂ ನಾವೀನ್ಯತೆಗೆ ಉತ್ತೇಜನ ನೀಡಲು ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಆರಂಭಿಸಲಾಗಿದೆ. ಕೊವಿಡ್ ಮಧ್ಯೆ ಯಶಸ್ವಿಯಾಗಿ ದ್ವಿತೀಯ ಪಿಯು ಪರೀಕ್ಷೆ ನಡೆದಿದೆ. ಕಲಬುರಗಿ, ಚಿಂಚೋಳಿ ಎಪಿಎಂಸಿ ಇ-ನಾಮ್‌ಗೆ ಸೇರ್ಪಡೆಯಾಗಿದೆ. ಎಪಿಎಂಸಿ ಶುಲ್ಕ 0.60ಗೆ ಇಳಿಕೆಯಾಗಿದೆ. ಹಾಜರಿ ರಹಿತ, ಕಾಗದ ರಹಿತ ಸರ್ಕಾರಿ ಸೇವೆ ಮನೆಮನೆಗೆ ತಲುಪುತ್ತೆ. ಎಸ್‌ಸಿ, ಎಸ್‌ಟಿ ಸಮಗ್ರ ಅಭಿವೃದ್ಧಿಗೆ ₹30 ಸಾವಿರ ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮಾಣೆಕ್‌ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲರು ಭಾಷಣದಲ್ಲಿ ವಿವರಿಸಿದ್ದಾರೆ.

Published On - 9:39 am, Tue, 26 January 21

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ