ಬೆಂಗಳೂರಿನಲ್ಲಿರುವ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ರಾಜ್ಯಪಾಲ ಗೆಹ್ಲೋಟ್ ಅವರಿಂದ ಸನ್ಮಾನ

ಇದೇ ವೇಳೆ, ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ, ಆಯಾ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ

ಬೆಂಗಳೂರಿನಲ್ಲಿರುವ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ತೆರಳಿ ರಾಜ್ಯಪಾಲ ಗೆಹ್ಲೋಟ್ ಅವರಿಂದ ಸನ್ಮಾನ
ಸ್ವಾತಂತ್ರ್ಯ ಹೋರಾಟಗಾರರ ಮನೆಗಳಿಗೆ ತೆರಳಿ ರಾಜ್ಯಪಾಲರಿಂದ ಸನ್ಮಾನ
Follow us
| Edited By: ಸಾಧು ಶ್ರೀನಾಥ್​

Updated on: Aug 05, 2022 | 3:23 PM

ಬೆಂಗಳೂರು: ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ (azadi ka amrit mahotsav) ಹಿನ್ನೆಲೆಯಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar chand gehlot) ಅವರು ನಗರದ ಇಬ್ಬರು ಸ್ವಾತಂತ್ರ್ಯ ಹೋರಾಟಗಾರರ (freedom fighter) ಮನೆಗಳಿಗೆ ತೆರಳಿ ಹಿರಿಯ ಚೇತನರನ್ನು ಸನ್ಮಾನಿಸಲಿದ್ದಾರೆ.

ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಸಂಸ್ಮರಣಾ ದಿನವಾದ ಆಗಸ್ಟ್ 9 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಮಲ್ಲೇಶ್ವರಂ ಬಡಾವಣೆಯಲ್ಲಿರುವ ವಿ. ನಾಗಭೂಷಣ ರಾವ್ ಅವರ ಮನೆಗೆ ತೆರಳಿ ರಾಜ್ಯಪಾಲರು ಸನ್ಮಾನಿಸಿ ಗೌರವ ಅರ್ಪಿಸಲಿದ್ದಾರೆ.

ಹಾಗೆಯೇ, ಅದೇ ದಿನ ಬೆಳಿಗ್ಗೆ 11.00 ಗಂಟೆಗೆ ಹಲಸೂರು ಬಡಾವಣೆಯಲ್ಲಿರುವ ಆರ್. ನಾರಾಯಣಪ್ಪ ಅವರ ಮನೆಗೆ ತೆರಳಿ ಸನ್ಮಾನಿಸಲಿದ್ದಾರೆ.

ಸ್ವಾತಂತ್ರ್ಯಕ್ಕೆ ಶ್ರಮಿಸಿದ ಇನ್ನುಳಿದ ಸ್ವಾತಂತ್ರ್ಯ ಹೋರಾಟಗಾರರನ್ನು ಅವರ ಮನೆಗಳಿಗೇ ತೆರಳಿ, ಆಯಾ ಜಿಲ್ಲಾಡಳಿತದ ಮೂಲಕ ಅವರ ಮನೆಗಳಲ್ಲೇ ಸನ್ಮಾನಿಸಲು ಕ್ರಮ ವಹಿಸುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಸೂಚಿಸಿದ್ದಾರೆ ಎಂದು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್. ಪ್ರಭುಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಆಜಾದಿ ಕಾ ಅಮೃತ್ ಮಹೋತ್ಸವ್ ಕುರಿತು ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ