ಕಿರುಕುಳ ಆರೋಪ: ಗ್ರಾಮ ಪಂಚಾಯಿತಿ ಸಿಬ್ಬಂದಿ ಆತ್ಮಹತ್ಯೆ
ಕೊಪ್ಪಳ: ಗ್ರಾಮ ಪಂಚಾಯಿತಿ ಪಿಡಿಒ ಹಾಗು ಗ್ರಾ.ಪಂ ಅಧ್ಯಕ್ಷೆಯ ಮೈದುನನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ಅಂಟರಠಾಟಾ ಗ್ರಾಮದ ಕಂಪ್ಯೂಟರ್ ಆಪರೇಟರ್ ರಾಜಶೇಖರ್ ತಮ್ಮಣ್ಣವರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಜನವರಿ 20ರಂದು ಮನೆಯಲ್ಲಿ ವಿಷ ಸೇವಿಸಿ ರಾಜಶೇಖರ್ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ರಾಜಶೇಖರ್ ಮೃತಪಟ್ಟಿದ್ದಾರೆ. ಪಿಡಿಒ ಅಮೀನಸಾಬ್, ಗ್ರಾ.ಪಂ ಅಧ್ಯಕ್ಷೆ ಮಹಾದೇವಿ ಅವರ ಮೈದುನ ಕಿರುಕುಳ ನೀಡುತ್ತಿದ್ದರು […]
ಕೊಪ್ಪಳ: ಗ್ರಾಮ ಪಂಚಾಯಿತಿ ಪಿಡಿಒ ಹಾಗು ಗ್ರಾ.ಪಂ ಅಧ್ಯಕ್ಷೆಯ ಮೈದುನನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದ ಸಿಬ್ಬಂದಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಕುಷ್ಟಗಿ ತಾಲೂಕಿನ ಅಂಟರಠಾಟಾ ಗ್ರಾಮದ ಕಂಪ್ಯೂಟರ್ ಆಪರೇಟರ್ ರಾಜಶೇಖರ್ ತಮ್ಮಣ್ಣವರ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಜನವರಿ 20ರಂದು ಮನೆಯಲ್ಲಿ ವಿಷ ಸೇವಿಸಿ ರಾಜಶೇಖರ್ ಆತ್ಮಹತ್ಯೆಗೆ ಯತ್ನಿಸಿದ್ದ. ತಕ್ಷಣ ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಿಸದೆ ಇಂದು ಆಸ್ಪತ್ರೆಯಲ್ಲಿ ರಾಜಶೇಖರ್ ಮೃತಪಟ್ಟಿದ್ದಾರೆ. ಪಿಡಿಒ ಅಮೀನಸಾಬ್, ಗ್ರಾ.ಪಂ ಅಧ್ಯಕ್ಷೆ ಮಹಾದೇವಿ ಅವರ ಮೈದುನ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಸಂಬಂಧಿಕರು ಪ್ರತಿಭಟನೆ ನಡೆಸಿದ್ದಾರೆ.
ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಂಬಂಧಿಕರು ಮತ್ತು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹನಮಸಾಗರ ಪೊಲೀಸರು, ತಾಲೂಕು ಪಂಚಾಯಿತಿ ಇಒ ಸ್ಥಳಕ್ಕೆ ದೌಡಾಯಿಸಿದ್ದಾರೆ. ಘಟನೆ ಸಂಬಂಧ ಹನಮಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.