ಗ್ರಾಮ ಪಂಚಾಯತಿ ಚುನಾವಣೆ: ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ, ನಟ ವಿನೋದ್ ರಾಜ್

ನೆಲಮಂಗಲ ತಾಲೂಕಿನ ಮೈಲನಹಳ್ಳಿ ಮತ ಕೇಂದ್ರ ಸಂಖ್ಯೆ 167 ರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಮತ ಚಲಾಯಿಸಿದ್ದಾರೆ.

ಗ್ರಾಮ ಪಂಚಾಯತಿ ಚುನಾವಣೆ: ಮತ ಚಲಾಯಿಸಿದ ಹಿರಿಯ ನಟಿ ಲೀಲಾವತಿ, ನಟ ವಿನೋದ್ ರಾಜ್
ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್
Edited By:

Updated on: Dec 22, 2020 | 11:56 AM

ಬೆಂಗಳೂರು: ಮೊದಲ ಹಂತದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಮತದಾನ ಮಾಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲೂಕಿನ ಮೈಲನಹಳ್ಳಿ ಮತ ಕೇಂದ್ರ ಸಂಖ್ಯೆ 167 ರಲ್ಲಿ ಹಿರಿಯ ನಟಿ ಲೀಲಾವತಿ ಹಾಗೂ ನಟ ವಿನೋದ್ ರಾಜ್ ಮತ ಚಲಾಯಿಸಿದ್ದಾರೆ. ಇನ್ನು ಮಾಧ್ಯಮದೊಂದಿಗೆ ಮಾತನಾಡಿದ ಲೀಲಾವತಿ, ಎಲ್ಲರೂ ಮತದಾನ ಮಾಡಬೇಕು. ಮತದಾನ ನಮ್ಮೆಲ್ಲರ ಕರ್ತವ್ಯ ನಮಗೆ ಬೇಕಾದಂತಹ ಗ್ರಾಮದ ಅಭಿವೃದ್ದಿ ಮಾಡುವ ಅಭ್ಯರ್ಥಿಗಳನ್ನ ಆಯ್ಕೆ ಮಾಡಬೇಕು ಎಂದರು.