ಕಾಲುವೆಗೆ ಉರುಳಿದ ಕಾರು: ಮತ ಎಣಿಕೆ ಏಜೆಂಟ್ ಆಗಲು ಹೊರಟಿದ್ದವರು ಸೇರಿದ್ದು ಮಸಣಕ್ಕೆ
ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಗ್ರಾಮ ಪಂಚಾಯ್ತಿ ಮತ ಎಣಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದ ಇಬ್ಬರು ಹಾವೇರಿಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಹಾವೇರಿ: ಚಾಲಕನ ನಿಯಂತ್ರಣ ತಪ್ಪಿ ಕಾರು ಕಾಲುವೆಗೆ ಉರುಳಿ ಬಿದ್ದ ಪರಿಣಾಮದಿಂದಾಗಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ನಡೆದಿದೆ.
ಪ್ರಕಾಶ ಬನ್ನಿಮಟ್ಟಿ (40 ವರ್ಷ) ಮತ್ತು ಸಿದ್ದನಗೌಡ ಬಿಷ್ಟನಗೌಡರ (45 ವರ್ಷ) ಮೃತ ದುರ್ದೈವಿಗಳಾಗಿದ್ದು, ಮೃತರು ಹಾವೇರಿ ತಾಲೂಕಿನ ನೆಗಳೂರು ಗ್ರಾಮದ ನಿವಾಸಿಗಳಾಗಿದ್ದಾರೆ. ಗ್ರಾಮ ಪಂಚಾಯತಿ ಮತ ಎಣಿಕೆ ಹಿನ್ನೆಲೆಯಲ್ಲಿ ಅಭ್ಯರ್ಥಿಯ ಪರವಾಗಿ ಮತ ಎಣಿಕೆಯ ಏಜೆಂಟ್ ಆಗಿದ್ದ ಇಬ್ಬರು ಹಾವೇರಿಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ.
ಚಾಲಕನ ನಿಯಂತ್ರಣ ತಪ್ಪಿ ತುಂಗಾ ಮೇಲ್ದಂಡೆ ಯೋಜನೆಯ ಕಾಲುವೆಗೆ ಕಾರ್ ಉರುಳಿ ಬಿದ್ದಿದ್ದರಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಗುತ್ತಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಘಟನೆ ನಂತರ ಸ್ಥಳೀಕರು ಮೃತ ದೇಹಗಳನ್ನು ಕಾರಿನಿಂದ ಹೊರತೆಗೆದಿದ್ದಾರೆ.
Published On - 9:50 am, Wed, 30 December 20