ಗ್ರಾಮ ಪಂಚಾಯಿತಿ ಚುನಾವಣೆಗೆ ಮುಹೂರ್ತ ಫಿಕ್ಸ್.. ತಕ್ಷಣದಿಂದಲೇ ನೀತಿ ಸಂಹಿತೆ ಜಾರಿ
ರಾಜ್ಯದಲ್ಲಿ 2 ಹಂತಗಳಲ್ಲಿ ಗ್ರಾಮಪಂಚಾಯಿತಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಡೇಟ್ ಫಿಕ್ಸ್ ಮಾಡಿದೆ. ಡಿಸೆಂಬರ್ 22, 27ರಂದು ರಾಜ್ಯದಲ್ಲಿ ಚುನಾವಣೆ ನಡೆಯಲಿದೆ.
ಬೆಂಗಳೂರು: ಕೊರೊನಾದಿಂದ ಮುಂದೂಡಲ್ಪಟ್ಟಿದ್ದ ಗ್ರಾಮ ಪಂಚಾಯತ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. 2 ಹಂತಗಳಲ್ಲಿ ಗ್ರಾಮಪಂಚಾಯಿತಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 22ರಂದು ಮೊದಲ ಹಂತ, ಡಿಸೆಂಬರ್ 27ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ.
ಗ್ರಾ.ಪಂ ವ್ಯಾಪ್ತಿಗಳಲ್ಲಿ ಇಂದಿನಿಂದಲೇ ನೀತಿ ಸಂಹಿತೆ ಜಾರಿಗೆ ಬರಲಿದೆ. ಎಲ್ಲಾ ಜಿಲ್ಲೆಗಳಲ್ಲಿ ಮೊದಲ ಮತ್ತು ಎರಡನೇ ಹಂತದಲ್ಲಿ ಚುನಾವಣೆ ಜರುಗಲಿದೆ. ಒಟ್ಟು 5,762 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದ್ದು ಮೊದಲ ಹಂತದ ಚುನಾವಣೆಯಲ್ಲಿ 2930 ಗ್ರಾ.ಪಂಗಳಲ್ಲಿ ಬೆಳಿಗ್ಗೆ 7ರಿಂದ ಸಂಜೆ 5ರವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಹಾಗೂ ಎರಡನೇ ಹಂತದ ಚುನಾವಣೆ 2832 ಗ್ರಾ.ಪಂಗಳಲ್ಲಿ ನಡೆಯಲಿದೆ.
ಕೊವಿಡ್-19ರ ಕಾರಣ ಚುನಾವಣಾ ಆಯೋಗ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಇಲಾಖೆಯ ಸಹಕಾರ ಪಡೆಯಲಿದೆ. ಚುನಾವಣೆ ವೇಳೆ ಕೋವಿಡ್ ನಿಯಮ ಪಾಲನೆ ಕಡ್ಡಾಯ ಎಂದು ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗ ಸುದ್ದಿಗೋಷ್ಠಿಯಲ್ಲಿ ತಿಳಿಸಿದೆ. ಚುನಾವಣೆಯಲ್ಲಿ ಕೆಲವು ಕಡೆ ಇವಿಎಂ ಬಳಕೆ ಮಾಡಲಾಗುತ್ತೆ. ಇನ್ನುಳಿದ ಕಡೆ ಮತದಾನಕ್ಕೆ ಬ್ಯಾಲೆಟ್ ಪೇಪರ್ಗಳನ್ನೇ ಬಳಸಲಾಗುತ್ತೆ.
ಇದನ್ನೂ ಓದಿ: ಅಭಿವೃದ್ಧಿ ಕಾಣದ ಗ್ರಾಮ, ಗ್ರಾ.ಪಂ ಸಂಪೂರ್ಣ ವಿಫಲ: ಗ್ರಾಮಸ್ಥರು ಕೊಟ್ಟ ಎಚ್ಚರಿಕೆ ಏನು?
Published On - 12:14 pm, Mon, 30 November 20