ರಾಯಚೂರು: ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯನನ್ನು ಬರ್ಬರವಾಗಿ ಇರಿದು ಕೊಲೆಮಾಡಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಲಿಂಗಸುಗೂರು ತಾಲೂಕಿನ ಪೈದೊಡ್ಡಿ ಗ್ರಾಮದ ಹನುಮಂತ ಕೊಲೆಯಾದ ವ್ಯಕ್ತಿ.
ಗೌಡರು ಹಾಗೂ ಗುರಗುಂಟ ಗ್ರಾಮದ ಮಧ್ಯದ ನಾಲೆ ಹತ್ತಿರ ಗ್ರಾಮ ಪಂಚಾಯತಿ ಸದಸ್ಯ ಹನುಮಂತ ಬೈಕ್ ಮೇಲೆ ಬರುತ್ತಿದ್ದ ವೇಳೆ ಅಡ್ಡಗಟ್ಟಿದ ಮೂವರು ದುಷ್ಕರ್ಮಿಗಳು, ಹನುಮಂತನನ್ನು ಬರ್ಬರವಾಗಿ ಇರಿದು ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸದ್ಯ ಹಟ್ಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹಳೆ ವೈಷಮ್ಯವೇ ಕೊಲೆಗೆ ಕಾರಣವೆನ್ನಲಾಗಿದೆ. ಈ ಹಿನ್ನೆಲೆಯಿಂದಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬೇಟೆಗೆ ಬಲೆ ಬೀಸಿದ್ದಾರೆ.