ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಮರಳಿದ ಯೋಧರಿಗೆ ಭರ್ಜರಿ ಸ್ವಾಗತ

ಹಾವೇರಿ: ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಸುರಕ್ಷಿತವಾಗಿ ಊರಿಗೆ ಮರಳಿದ ಹೆಮ್ಮೆಯ ಪುತ್ರರಿಗೆ ಹುಟ್ಟೂರಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ತಾಲೂಕಿನ ಅಗಡಿ ಗ್ರಾಮದ ಇಮ್ತಿಯಾಜ್ ಹಾವನೂರು ಮತ್ತು ಮಹೇಶ ಕುಂಬಾರ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಗ್ರಾಮಸ್ಥರು ಮನೆಗೆ ಕರೆತಂದಿದ್ದಾರೆ. ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ನಿವೃತ್ತ ಯೋಧರನ್ನ ಗ್ರಾಮಸ್ಥರು ಸ್ವಾಗತಿಸಿದ್ದಾರೆ. 17 ವರ್ಷಗಳ ಕಾಲ ಯೋಧರು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜಮ್ಮು-ಕಾಶ್ಮೀರ, ಶ್ರೀನಗರ, ಮಣಿಪುರ, ನಾಗಾಲ್ಯಾಂಡ್ ಸೇರಿದಂತೆ ಹಲವೆಡೆ ದೇಶ […]

ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಮರಳಿದ ಯೋಧರಿಗೆ ಭರ್ಜರಿ ಸ್ವಾಗತ
ಸಾಧು ಶ್ರೀನಾಥ್​

Updated on: Feb 02, 2020 | 6:45 PM

ಹಾವೇರಿ: ಗಡಿಯಲ್ಲಿ ದೇಶ ಸೇವೆ ಸಲ್ಲಿಸಿ ಸುರಕ್ಷಿತವಾಗಿ ಊರಿಗೆ ಮರಳಿದ ಹೆಮ್ಮೆಯ ಪುತ್ರರಿಗೆ ಹುಟ್ಟೂರಲ್ಲಿ ಭರ್ಜರಿ ಸ್ವಾಗತ ಸಿಕ್ಕಿದೆ. ತಾಲೂಕಿನ ಅಗಡಿ ಗ್ರಾಮದ ಇಮ್ತಿಯಾಜ್ ಹಾವನೂರು ಮತ್ತು ಮಹೇಶ ಕುಂಬಾರ ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಗ್ರಾಮಸ್ಥರು ಮನೆಗೆ ಕರೆತಂದಿದ್ದಾರೆ.

ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪಟಾಕಿ ಸಿಡಿಸಿ ನಿವೃತ್ತ ಯೋಧರನ್ನ ಗ್ರಾಮಸ್ಥರು ಸ್ವಾಗತಿಸಿದ್ದಾರೆ. 17 ವರ್ಷಗಳ ಕಾಲ ಯೋಧರು ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಜಮ್ಮು-ಕಾಶ್ಮೀರ, ಶ್ರೀನಗರ, ಮಣಿಪುರ, ನಾಗಾಲ್ಯಾಂಡ್ ಸೇರಿದಂತೆ ಹಲವೆಡೆ ದೇಶ ಸೇವೆ ಸಲ್ಲಿಸಿ ಇದೀಗ ನಿವೃತ್ತರಾಗಿ ಊರಿಗೆ ಮರಳಿದ್ದಾರೆ.

ನಿವೃತ್ತ ಯೋಧರನ್ನು ತೆರೆದ ವಾಹನದಲ್ಲಿ ಮೆರವಣಿಗೆ ಮೂಲಕ ಗ್ರಾಮಸ್ಥರು ಊರಿಗೆ ಕರೆದೊಯ್ದಿದ್ದಾರೆ. ಸ್ಥಳೀಯ ಶಾಸಕ ನೆಹರು ಓಲೇಕಾರ್ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು ನಿವೃತ್ತ ಯೋಧರ ಮೆರವಣಿಗೆಗೆ ಸಾಥ್ ನೀಡಿದ್ದಾರೆ.






ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us