ಚಿಕ್ಕಮಗಳೂರು: ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿತ ಸಂಭವಿಸಿ ರಸ್ತೆಗಳು ಮುಚ್ಚಿ ಹೋಗಿದ್ದವು. ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಆ ಮಾರ್ಗದಲ್ಲಿ ಐದು ದಿನಗಳ ಕಾಲ ವಾಹನ ಸಂಚಾರವನ್ನು ನಿಷೇಧಿಸಿತ್ತು.
ಇದೀಗ, ಚಾರ್ಮಾಡಿ ಘಾಟ್ನ ರಸ್ತೆ ಮೇಲೆ ಬಿದ್ದಿದ್ದ ಮಣ್ಣು ಹಾಗೂ ಬಂಡೆಗಳನ್ನ ತೆರವುಗೊಳಿಸಿ ಲಘು ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.
ಬೆಳಿಗ್ಗೆ 7ರಿಂದ ಸಂಜೆ 7 ರವರೆಗೆ ಮಾತ್ರ ವಾಹನ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ನಾಳೆಯಿಂದಲೇ ವಾಹನ ಸಂಚಾರಕ್ಕೆ ಪ್ರಾರಂಭವಾಗುವುದು ಎಂದು ಜಿಲ್ಲಾಧಿಕಾರಿ ಡಾಕ್ಟರ್ ಬಗಾದಿ ಗೌತಮ್ ಮಾಹಿತಿ ನೀಡಿದ್ದಾರೆ.