ಮೊಬೈಲ್ ಕಳ್ಳತನ ಆರೋಪ: ಯುವಕನ ಮೇಲೆ ಯುವಕರ ಗುಂಪಿನಿಂದ ಹಲ್ಲೆ.. ಎಲ್ಲಿ?
ಮಂಗಳೂರು: ಮೊಬೈಲ್ ಕಳ್ಳತನ ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪರನೀರು ಬಳಿ ನಡೆದಿದೆ. ಹಲ್ಲೆ ಮಾಡಿದ ನಾಲ್ವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಮೊಬೈಲ್ ಕಳ್ಳತನ ಆರೋಪಿಸಿ ಯುವಕನನ್ನು ನಾಲ್ವರು ಯುವಕರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಶರ್ಟ್ ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಅಮಾನುಷವಾಗಿ ಕೈ, ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಜೊತೆಗೆ ಹಲ್ಲೆ ನಡೆಸುತ್ತ ಅವಾಚ್ಯ ಶಬ್ದಗಳ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ […]

ಮಂಗಳೂರು: ಮೊಬೈಲ್ ಕಳ್ಳತನ ಆರೋಪಿಸಿ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕದ ಪರನೀರು ಬಳಿ ನಡೆದಿದೆ. ಹಲ್ಲೆ ಮಾಡಿದ ನಾಲ್ವರು ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಮೊಬೈಲ್ ಕಳ್ಳತನ ಆರೋಪಿಸಿ ಯುವಕನನ್ನು ನಾಲ್ವರು ಯುವಕರು ಹಿಗ್ಗಾಮುಗ್ಗ ಥಳಿಸಿದ್ದಾರೆ. ಶರ್ಟ್ ಹರಿದು ಹಾಕಿ ಅರೆಬೆತ್ತಲೆಗೊಳಿಸಿ ಅಮಾನುಷವಾಗಿ ಕೈ, ಕೋಲಿನಿಂದ ಹಲ್ಲೆ ಮಾಡಿದ್ದಾರೆ. ಜೊತೆಗೆ ಹಲ್ಲೆ ನಡೆಸುತ್ತ ಅವಾಚ್ಯ ಶಬ್ದಗಳ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ. ಹಲ್ಲೆಯ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಘಟನೆ ತಿಳಿಯುತ್ತಿದ್ದಂತೆ ಬಂಟ್ವಾಳ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.