ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದ ಹಲವೆಡೆ ದಿಢೀರನೆ ಗುಡುಗು, ಬಿರುಗಾಳಿ ಸಹಿತ ಆಲಿಕಲ್ಲು ಮಳೆಯಾಗಿದೆ. ಯಶವಂತಪುರ, ಯಲಹಂಕ, ಪೀಣ್ಯ, ಮಲ್ಲೇಶ್ವರಂ, ಶೇಷಾದ್ರಿಪುರಂ, ಮೇಖ್ರಿ ಸರ್ಕಲ್, ಕಾರ್ಪೊರೇಷನ್, ಮೆಜೆಸ್ಟಿಕ್, ವಿಧಾನಸೌಧ, ಕಬ್ಬನ್ಪಾರ್ಕ್, ಶಾಂತಿನಗರ ಸೇರಿದಂತೆ ನಗರದ ಹಲವೆಡೆ ಧಾರಾಕಾರ ಮಳೆ ಸುರಿದಿದೆ.
ಮೈಸೂರು ರಸ್ತೆ, ಬ್ಯಾಟರಾಯನಪುರ, ವಿಜಯನಗರ, ಮಾಗಡಿ ರಸ್ತೆ ಮುಂತಾದ ಕಡೆ ಸಂಚಾರ ದಟ್ಟಣೆ ಹೆಚ್ಚಾಗಿದೆ. ಮೆಜೆಸ್ಟಿಕ್ ಸುತ್ತಮುತ್ತ ಭಾರಿ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿದೆ. 7 ಗಂಟೆಗೆ ಬಿಎಂಟಿಸಿ ಬಸ್ ಸಂಚಾರ ಅಂತ್ಯ ಹಿನ್ನೆಲೆಯಲ್ಲಿ ಪ್ರಯಾಣಿಕರು ತಮ್ಮ ತಮ್ಮ ಮನೆಗೆ ತೆರಳಲು ಮಳೆಯಲ್ಲೇ ಬಸ್ ಹತ್ತುತ್ತಿದ್ದಾರೆ.
Published On - 6:16 pm, Tue, 26 May 20