AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಸದ್ಯ […]

Sira By Election ವಾಗ್ದಾನ ಪೂರೈಸಿದ ಮಾಜಿ ಪ್ರಧಾನಿ ದೇವೇಗೌಡ, ಶಾಲೆಗೆ 1 ಲಕ್ಷ ನೆರವು
Follow us
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​

Updated on: Nov 23, 2020 | 10:06 AM

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ಧಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ.

ಶಿರಾ ಉಪಚುನಾವಣೆಯ ಪ್ರಚಾರ ಸಂದರ್ಭದಲ್ಲಿ ಸೀಗಲಹಳ್ಳಿ ಗ್ರಾಮದಲ್ಲಿ ಮಾಜಿ ಪ್ರಧಾನಿ ಹೆಚ್‌ಡಿಡಿ ಶಿರಾ ತಾಲೂಕನ್ನು ದತ್ತು ಪಡೆಯುವುದಾಗಿ ಘೋಷಣೆ‌ ಮಾಡಿದ್ದರು. ತಮಗೆ ಬರುವ ಅನುದಾನದಲ್ಲಿ ಅಭಿವೃದ್ಧಿ ಮಾಡುವ ಬಗ್ಗೆ ತಮ್ಮ ನಿರ್ಧಾರವನ್ನು ಜನಗಳ ಜೊತೆ ಹಂಚಿಕೊಂಡಿದ್ದರು. ಈ ವೇಳೆ ಸೀಗಲಹಳ್ಳಿಯ ಸರ್ಕಾರಿ ಶಾಲೆ ಅಭಿವೃದ್ದಿಗೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದರು.

ಈ ಹಿನ್ನೆಲೆಯಲ್ಲಿ ಸದ್ಯ ಈಗ ಹೆಚ್‌.ಡಿ.ದೇವೇಗೌಡ ಜನರ ಮನವಿಗೆ ಸ್ಪಂದಿಸಿದ್ದಾರೆ. ದೇವೆಗೌಡರು ತಮ್ಮ ಅಪ್ತ ಕಾರ್ಯದರ್ಶಿ, ಎಂಎಲ್‌ಸಿ ತಿಪ್ಪೇಸ್ವಾಮಿ ಮೂಲಕ ವೈಯಕ್ತಿಕವಾಗಿ 1 ಲಕ್ಷ ರೂಪಾಯಿ ಧನಸಹಾಯ ಮಾಡಿದ್ದಾರೆ. ಶಾಲೆಯ ಎಸ್.ಡಿ.ಎಮ್.ಸಿ ಸದಸ್ಯರು, ಸಿಬ್ಬಂದಿಗಳ ಹಾಗೂ ಗ್ರಾಮಸ್ಥರ ಸಮ್ಮುಖದಲ್ಲಿ ಹಣ ಹಸ್ತಾಂತರಿಸಲಾಗಿದೆ. ಸೀಗಲಹಳ್ಳಿ ಗ್ರಾಮಸ್ಥರು ಶಾಲೆಗೆ ಧನಸಹಾಯ ಮಾಡಿದ ಹೆಚ್‌.ಡಿ.ದೇವೇಗೌಡರಿಗೂ ಹಾಗೂ ಎಂ.ಎಲ್‌.ಸಿ ತಿಪ್ಪೆಸ್ವಾಮಿಯವರಿಗೂ ಧನ್ಯವಾದ ತಿಳಿಸಿದ್ದಾರೆ.