
ಬಾಗಲಕೋಟೆ: ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಳವಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜಮಖಂಡಿ ತಾಲೂಕಿನ ಶೂರ್ಪಾಲಿ ಬಳಿಯಿರುವ ದೇವೇಗೌಡ ಸೇತುವೆ ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹಾಗಾಗಿ, ಶೂರ್ಪಾಲಿ ಮತ್ತು ಜಮಖಂಡಿ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಅಷ್ಟೇ ಅಲ್ಲ, ಮಹಿಳೆಯರು ಬಟ್ಟೆ ಒಗೆಯುತ್ತಿರುವುದು ಹಾಗೂ ಮಕ್ಕಳು ನೀರಲ್ಲಿ ಈಜುತ್ತಾ ಕುಣಿದು ಕುಪ್ಪಳಿಸುತ್ತಿರುವ ದೃಶ್ಯಗಳು ಸಹ ಕಂಡುಬಂದಿವೆ. HD ದೇವೇಗೌಡರು ಈ ಸೇತುವೆಯ ಶಂಕುಸ್ಥಾಪನೆ ನೆರವೇರಿಸಿದ್ದರು.
Published On - 1:34 pm, Fri, 16 October 20