ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ -HDK ಟಾಂಗ್​

| Updated By: KUSHAL V

Updated on: Dec 10, 2020 | 2:50 PM

ಕಾಂಗ್ರೆಸ್​ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ.

ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್‌ ಈಗ ಅಡಗಿ ಕುಳಿತಿದೆ -HDK ಟಾಂಗ್​
ಹೆಚ್​.ಡಿ. ಕುಮಾರಸ್ವಾಮಿ
Follow us on

ಬೆಂಗಳೂರು:ಭೂ ಸುಧಾರಣಾ ಕಾಯ್ದೆಗೆ ಸಂಬಂಧಿಸಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಕಾಂಗ್ರೆಸ್ ತೆರೆಮರೆಯ ರಾಜಕಾರಣ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ಆರೋಪಿಸಿದ್ದಾರೆ.

ಕಾಂಗ್ರೆಸ್​ಗೆ ಬಿಜೆಪಿ ವಿರುದ್ಧ ಹೋರಾಡಲು ಸಾಧ್ಯವಾಗುತ್ತಿಲ್ಲ. ಹಾಗಾಗಿ, ಜೆಡಿಎಸ್ ವಿರುದ್ಧ ತನ್ನ ಹೋರಾಟಗಳನ್ನು ರೂಪಿಸುತ್ತಿದೆ. ರೈತ ನಾಯಕರು ಎನಿಸಿಕೊಂಡ ಕೆಲವರ ಹಿಂದೆ ಕಾಂಗ್ರೆಸ್ ಈಗ ಅಡಗಿ ಕುಳಿತಿದೆ. ರೈತ ನಾಯಕರ ಮುಖಾಂತರ ರಾಜಕೀಯದ ಹೇಳಿಕೆಗಳನ್ನು ಕೊಡಿಸುತ್ತಿದೆ. ಜೊತೆಗೆ ಕಾಂಗ್ರೆಸ್, ರೈತ ಸಂಘಗಳನ್ನೂ ಒಡೆಯುವ ಕೆಲಸಕ್ಕೆ ಕೈ ಹಾಕಿದೆ ಎಂದು ಹೆಚ್​.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

‘ರೈತರಿಗಾಗಿ ಹೋರಾಡುವ ಪಕ್ಷ ಜೆಡಿಎಸ್’
ರಾಜ್ಯದಲ್ಲಿ ರೈತರಿಗೆ ಸ್ಪಂದಿಸುವ ಪಕ್ಷವೇನಾದರೂ ಇದ್ದರೆ ಅದು ಜೆಡಿಎಸ್ ಮಾತ್ರ. ಜೆಡಿಎಸ್ ರಾಜಕೀಯ ಪಕ್ಷ ಮಾತ್ರವಲ್ಲ. ಅದು ರೈತರಿಗಾಗಿ ಹೋರಾಡುವ ರೈತ ಸಂಘವೂ ಹೌದು ಎಂಬುದನ್ನು ಹೇಳಿಕೊಳ್ಳಲು ನನಗೆ ಹೆಮ್ಮೆ ಇದೆ ಎಂದು ಹೆಚ್​.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದವು. ನಿತ್ಯವೂ ಆತ್ಮಹತ್ಯೆಗಳು ವರದಿಯಾಗುತ್ತಿದ್ದವು. ಆಗ ರಾಜ್ಯದಾದ್ಯಂತ ಪ್ರವಾಸ ಮಾಡಿ, ಸಂಕಷ್ಟದಲ್ಲಿದ್ದ ರೈತರಿಗೆ ಕೈಲಾದಷ್ಟು ನೆರವು ನೀಡಿ, ಅವರಲ್ಲಿ ವಿಶ್ವಾಸ ಮೂಡಿಸುವ ಪ್ರಯತ್ನವನ್ನು ನಾನು ಮಾಡಿದ್ದೆ ಎಂದಿದ್ದಾರೆ.

2013-14ರ ವೇಳೆಯಲ್ಲಿ ಕಾಂಗ್ರೆಸ್ ಅಧಿಕಾರದಲ್ಲಿತ್ತು. ಜಾನುವಾರುಗಳಲ್ಲಿ ಕಾಲುಬಾಯಿ ಜ್ವರ ಕಾಣಿಸಿಕೊಂಡಿತ್ತು. ರಾಮನಗರ, ಮಂಡ್ಯದಲ್ಲಿ ರೋಗದ ರುದ್ರ ನರ್ತನಕ್ಕೆ ಸರ್ಕಾರ ಸುಮ್ಮನಿತ್ತು. ಆಗ ಚನ್ನಪಟ್ಟಣ, ರಾಮನಗರ, ಕನಕಪುರ, ಮಂಡ್ಯದಲ್ಲಿ ಪ್ರತಿ ಕುಟುಂಬಕ್ಕೆ ₹25 ಸಾವಿರ ನೆರವು ವೈಯಕ್ತಿವಾಗಿ ನೀಡಿದ್ದೆ. ಆಗ ಈ ರೈತ ನಾಯಕರು ಎಲ್ಲಿದ್ದರು? ಎಂದು ಪ್ರಶ್ನಿಸಿದ್ದಾರೆ.

JDSಗೆ ಮರುಜನ್ಮ ನೀಡಿದ್ದೆವು.. ಆದ್ರೆ ಅವರು ‘ಕೈ’ ಹಿಡಿದು ಹಾಳಾಗಿ ಹೋದ್ರು: ರೇಣುಕಾಚಾರ್ಯ ಟಾಂಗ್