AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೊಡ್ಡಗೌಡ್ರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ.. ನಿನಗೇನು ಗೊತ್ತು ಅವರ ಇತಿಹಾಸ? -HDK ಏಕವಚನದಲ್ಲಿ ವಾಗ್ದಾಳಿ

ದೇವೇಗೌಡರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ. ಹೇಮಾವತಿ ನದಿ ಈಜಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ?

ದೊಡ್ಡಗೌಡ್ರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ.. ನಿನಗೇನು ಗೊತ್ತು ಅವರ ಇತಿಹಾಸ? -HDK ಏಕವಚನದಲ್ಲಿ ವಾಗ್ದಾಳಿ
H.D.ಕುಮಾರಸ್ವಾಮಿ(ಎಡ); ಸಿದ್ದರಾಮಯ್ಯ (ಬಲ)
KUSHAL V
|

Updated on: Dec 12, 2020 | 1:31 PM

Share

ಬೆಂಗಳೂರು: ಇತ್ತೀಚೆಗೆ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಸಿದ್ದರಾಮಯ್ಯ ನನ್ನ ಹಾಗೂ ನನ್ನ ತಂದೆ ವಿರುದ್ಧ ಏಕವಚಕದಲ್ಲಿ ಮಾತಾಡಿದ್ದಾರೆ. ನಾನೂ ಸಹ ನಿಮ್ಮ ಬಗ್ಗೆ ಏಕವಚನದಲ್ಲಿಯೇ ಮಾತನಾಡ್ಲಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ನೀನು ಯಾಕಪ್ಪ ಆದಾಯ ಮಿತಿ 25 ಲಕ್ಷಕ್ಕೆ ಏರಿಕೆ ಮಾಡಿದೆ? ಎಂದು ಕುಮಾರಸ್ವಾಮಿ ಇದೇ ವೇಳೆ ಸಿದ್ದರಾಮಯ್ಯ ಅವರನ್ನು ಪ್ರಶ್ನಿಸಿದರು.

ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ? ದೇವೇಗೌಡರು ಕೃಷಿ ಮಾಡಿದ್ದಾರೆ, ಸಗಣಿ ಬಾಚಿದ್ದಾರೆ. ಹೇಮಾವತಿ ನದಿ ಈಜಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ನಿನಗೆ ಏನು ಗೊತ್ತು ದೇವಗೌಡರ ಇತಿಹಾಸ? ಎಂದು ಸಿದ್ದರಾಮಯ್ಯಗೆ ಖಾರವಾಗಿ ಪ್ರಶ್ನಿಸಿದರು.

ನಾನು ಬೇನಾಮಿ ವ್ಯವಹಾರ ಮಾಡಿದ್ದು ನೀವು ಅದನ್ನು ಸಾಬೀತು ಮಾಡಿದರೆ ರಾಜಕೀಯದಿಂದ ನಿವೃತ್ತಿ ಪಡೆಯುತ್ತೇನೆ. ನಾನು ನಿಮಗಿಂತ ದೊಡ್ಡ ಧ್ವನಿಯಲ್ಲಿ ಮಾತನಾಡಬಲ್ಲೆ. ನೀವು ಸಿಎಂ ಆಗಿದ್ದಾಗ ಲೀ ಮೆರಿಡಿಯನ್ ಹೋಟೆಲ್‌ನಲ್ಲಿ ಶುಗರ್ ಫ್ಯಾಕ್ಟರಿ ಕ್ಲಬ್ ನಡೆಸುತ್ತಿದ್ದವರು ಯಾರು? ನಿನ್ನ ಹಾಗೆ ನಾನು ಮಾಡಿಲ್ಲ ಸಿದ್ದರಾಮಯ್ಯ ಎಂದು ಕುಮಾರಸ್ವಾಮಿ ಏಕವಚನದಲ್ಲೇ ಮಾತನಾಡಿದರು.

ನೀನು ದೇವೇಗೌಡರ ಮುಂದೆ ಬಂದು ಕಣ್ಣೀರು ಹಾಕಿದ್ದೆ ಅಪ್ಪನಿಂದ ಮಕ್ಕಳವರೆಗೆ ಕಣ್ಣೀರು ಹಾಕುವುದು ಸಂಸ್ಕೃತಿ ಅಂತಾರೆ. ನೀನು ಡಿಸಿಎಂ ಆಗಿ ಸೋತ ನಂತರ ದೇವೇಗೌಡರ ಮುಂದೆ ಬಂದು ಕಣ್ಣೀರು ಹಾಕಿದ್ದೆ. ನಾವು ಜನರ ಕಷ್ಟ ನೋಡಿ ಕಣ್ಣೀರು ಹಾಕುತ್ತೇವೆ. ನೀನು ರೀ ಡೂ ಮಾಡಿಕೊಟ್ಟಿದ್ದು ಯಾರ ಒಳ್ಳೆಯದಕ್ಕೆ ಎಂದು ಏಕವಚನದಲ್ಲೇ ಕುಮಾರಸ್ವಾಮಿ ವಾಗ್ದಾಳಿ ಮುಂದುವರಿಸಿದರು.

HD ಕುಮಾರಸ್ವಾಮಿಗೆ ನಾಚಿಕೆಯಾಗಬೇಕು -ಸಿದ್ದರಾಮಯ್ಯ ಕೆಂಡಾಮಂಡಲ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ