AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಕುನಿ, ಮಂಥರೆ ಮಾತು ಕೇಳಿ ಜೆಡಿಎಸ್​​ ಪಕ್ಷವನ್ನು ಹೆಚ್​.ಡಿ. ಕುಮಾರಸ್ವಾಮಿ ಸರ್ವನಾಶ ಮಾಡುತ್ತಿದ್ದಾರೆ: ಜಿ.ಟಿ. ದೇವೇಗೌಡ ಗುಡುಗು

GT Devegowda | ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡುತ್ತಾ ಕಿಡಿಕಾರಿದ್ದಾರೆ.

ಶಕುನಿ, ಮಂಥರೆ ಮಾತು ಕೇಳಿ ಜೆಡಿಎಸ್​​ ಪಕ್ಷವನ್ನು ಹೆಚ್​.ಡಿ. ಕುಮಾರಸ್ವಾಮಿ ಸರ್ವನಾಶ ಮಾಡುತ್ತಿದ್ದಾರೆ: ಜಿ.ಟಿ. ದೇವೇಗೌಡ ಗುಡುಗು
ಜಿ.ಟಿ.ದೇವೇಗೌಡ (ಎಡ) ; ಹೆಚ್​.ಡಿ. ಕುಮಾರಸ್ವಾಮಿ (ಬಲ)
Skanda
| Edited By: ಸಾಧು ಶ್ರೀನಾಥ್​|

Updated on: Mar 15, 2021 | 12:52 PM

Share

ಮೈಸೂರು: ಮಹಾಭಾರತದಲ್ಲಿ ಶಕುನಿಯಿಂದ ಕೌರವರ ಸಂತತಿ ಸರ್ವ ನಾಶವಾಯಿತು. ರಾಮಾಯಣದಲ್ಲಿ ಮಂಥರೆಯ ಮಾತನ್ನು ಕೈಕೇಯಿ ಕೇಳಿದ ಪರಿಣಾಮ ರಾಮ ವನವಾಸಕ್ಕೆ ತೆರಳುವಂತಾಯಿತು. ಇದೀಗ ಮೈಸೂರಿನಲ್ಲೂ ಶಕುನಿ, ಮಂಥರೆಯ ಮಾತು ಕೇಳುತ್ತಿರುವ ಕುಮಾರಸ್ವಾಮಿ ಜೆಡಿಎಸ್ ಅನ್ನು ಸರ್ವನಾಶ ಮಾಡಲು ಹೊರಟಿದ್ದಾರೆ. ಮೈಮುಲ್ ಚುನಾವಣೆಯಲ್ಲಿ ಹೆಚ್. ಡಿ. ಕುಮಾರಸ್ವಾಮಿ ನನ್ನನ್ನು ಟಾರ್ಗೆಟ್ ಮಾಡಿಕೊಂಡಿದ್ದಾರೆ. ಆದರೆ, ಆ ಚುನಾವಣೆಯನ್ನು ನಾನು ಪ್ರತಿಷ್ಠೆಯಾಗಿ ತೆಗೆದುಕೊಂಡಿಲ್ಲ. ಕುಮಾರಸ್ವಾಮಿ ಏಕೆ ಹಾಗೆ ಪ್ರತಿಷ್ಠೆ ಎಂದುಕೊಂಡಿದ್ದಾರೋ ಗೊತ್ತಿಲ್ಲ ಎಂದು ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡುತ್ತಾ ಕಿಡಿಕಾರಿದ್ದಾರೆ.

‘ಮೈಸೂರು ಹೈಕಮಾಂಡ್​ನವರು ನನ್ನ ವಿರುದ್ಧ ಮಾತನಾಡುತ್ತಿದ್ದಾರೆ!’ ಮಾಜಿ ಸಚಿವ ಶಾಸಕ ಸಾ. ರಾ. ಮಹೇಶ್‌ರನ್ನು ಶಕುನಿಗೆ ಹೋಲಿಸಿದ ಜಿ.ಟಿ.ದೇವೇಗೌಡ, ಕುಮಾರಸ್ವಾಮಿ ಅವರೇ ನೀವ್ಯಾಕೆ ಶಕುನಿ ಮಾತು ಕೇಳುತ್ತಿದ್ದೀರಿ ? ಸಾ.ರಾ.ಮಹೇಶ್ ಛತ್ರಕ್ಕೆ ಬಂದು ನನ್ನನ್ನು ಜೆಡಿಎಸ್‌ನಿಂದ ಹೊರಗೆ ಹಾಕುತ್ತೇನೆ ಎಂದು ಹೇಳಿದ್ದೀರಿ. ಪದೇ ಪದೇ ನನ್ನನ್ನು ಯಾಕೆ ಅವಮಾನ ಮಾಡುತ್ತೀರಿ? ನಾನು ಎಲ್ಲಿಗೂ ಹೋಗದಂತೆ ಜೆಡಿಎಸ್‌ನಲ್ಲಿ ಕೂಡಿಹಾಕಿ ಬೀಗ ಹಾಕಲಾಗಿದೆ. ಕುಮಾರಸ್ವಾಮಿ ಅವರು ಯಾರು ಯಾರದ್ದೋ ಮಾತು ಕೇಳಿಕೊಂಡು ನನ್ನ ವಿರುದ್ಧ ಟೀಕೆ ಮಾಡುತ್ತಿದ್ದಾರೆ. ಹೆಚ್.ಡಿ.ಕೋಟೆಯಲ್ಲಿ ಮೈಮುಲ್ ಪ್ರಚಾರದ ವೇಳೆ ಮೈಸೂರು ಹೈಕಮಾಂಡ್​ನವರು ನನ್ನ ವಿರುದ್ಧ ಮಾತನಾಡಿದ್ದಾರೆ. ಜಿ.ಟಿ.ದೇವೇಗೌಡ ಎನ್ನುವ ಆಲದ ಮರವನ್ನು ಬುಡ ಸಮೇತ ಕಿತ್ತುಹಾಕಿ ಹೊಸ ಗಿಡ ನೆಡುತ್ತೇವೆಂದು ಹೇಳಿದ್ದಾರೆ. ಅವರ ಮಾತು ಕೇಳಿಕೊಂಡು ಕುಮಾರಸ್ವಾಮಿ ಕೂಡ ನನ್ನ ವಿರುದ್ಧ ಮಾತನಾಡಿದ್ದಾರೆ ಎಂದು ದೂರಿದ್ದಾರೆ.

‘ಜನರ ಆಶೀರ್ವಾದದಿಂದ ನನ್ನ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆದ’ ನಾನು ಯಾವತ್ತೂ ಅಧಿಕಾರಕ್ಕೆ ಆಸೆ ಪಟ್ಟಿಲ್ಲ. ನಾನು ಮನಸ್ಸು ಮಾಡಿದ್ದರೆ ಶಾಶ್ವತವಾಗಿ ಮೈಮುಲ್ ಅಧ್ಯಕ್ಷನಾಗಿರುತ್ತಿದ್ದೆ. ಯಾವ ಕಾಲದಲ್ಲೋ ಡಿಸಿಸಿ ಬ್ಯಾಂಕ್ ಅಧ್ಯಕ್ಷನಾಗುತ್ತಿದ್ದೆ. ನನ್ನ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚುನಾವಣೆಗೆ ಸ್ಪರ್ಧಿಸಿದಾಗ ಕುಮಾರಸ್ವಾಮಿ ಸಹಕಾರ ಕೊಡಲಿಲ್ಲ. ಸಾ.ರಾ.ಮಹೇಶ್ ಮಾತು ಕೇಳಿಕೊಂಡು ಪ್ರತಿಸ್ಪರ್ಧಿ ಚಂದ್ರಶೇಖರ್ ಪರವಾಗಿ ಮತಯಾಚನೆ ಮಾಡಿದರು. ಜನರ ಆಶೀರ್ವಾದದಿಂದ ನನ್ನ ಮಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆಗಿದ್ದಾನೆ. ಜನ ಯಾರ ಪರವಾಗಿದ್ದಾರೆ ಎಂಬುದನ್ನು ಮೈಮುಲ್ ಚುನಾವಣೆ ಫಲಿತಾಂಶ ನಿರ್ಣಯಿಸಲಿದೆ ಎಂದು ಶಾಸಕ ಜಿ.ಟಿ.ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ.

ಮೈಮುಲ್ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರೇ ಜೆಡಿಎಸ್ ಅಭ್ಯರ್ಥಿಗಳ ವಿರುದ್ಧವಾಗಿ ಪ್ರಚಾರ ಮಾಡುತ್ತಿದ್ದಾರೆ. ಮೈಸೂರಿನ ಹೈಕಮಾಂಡ್ ಮಾತು ಕೇಳಿಕೊಂಡು ಕುಮಾರಸ್ವಾಮಿ ಈ ರೀತಿ ಮಾಡುತ್ತಿದ್ದಾರೆ ಎನ್ನುವ ಮೂಲಕ ಶಾಸಕ ಸಾ.ರಾ.ಮಹೇಶ್ ವಿರುದ್ಧ ಹರಿಹಾಯ್ದಿದ್ದಾರೆ. ಪಿರಿಯಾಪಟ್ಟಣದಲ್ಲಿ ಮಾಜಿ ಶಾಸಕ ವೆಂಕಟೇಶ್ ಬೆಂಬಲಿಗರಿಗೆ ಜೆಡಿಎಸ್​ನವರೇ ಅನುಕೂಲ ಮಾಡಿಕೊಡುತ್ತಿದ್ದಾರೆ. ಜೆಡಿಎಸ್ ಶಾಸಕ‌ ಮಹದೇವ್ ಪುತ್ರನ ವಿರುದ್ಧವಾಗಿ ಸ್ವತಃ ಪಕ್ಷದವರೇ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜಿ.ಟಿ.ದೇವೇಗೌಡ ಅವರಿಗೆ ಜೆಡಿಎಸ್ ಪಕ್ಷದ ಬಾಗಿಲು ಬಂದ್ ಎಂದು ಹೆಚ್​.ಡಿ.ಕುಮಾರಸ್ವಾಮಿ ಹೇಳಿರುವುದಕ್ಕೆ ತಿರುಗೇಟು ನೀಡಿರುವ ಜಿ.ಟಿ.ದೇವೇಗೌಡ, ನಾನು ಈಗಲೂ ಜೆಡಿಎಸ್​ ಪಕ್ಷದಲ್ಲೇ ಇದ್ದೇನೆ. ವಿಧಾನಸಭೆಯಲ್ಲಿ ಜೆಡಿಎಸ್ ಶಾಸಕರ ಜತೆ ಕುಳಿತುಕೊಳ್ಳುತ್ತಿದ್ದೇನೆ. ನಾನು ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿಲ್ಲ. ಮೈಸೂರಿನ ಹೈಕಮಾಂಡ್ ಮಾತು ಕೇಳಿಕೊಂಡು ಕುಮಾರಸ್ವಾಮಿಯವರು ಈ ರೀತಿಯಾಗಿ ಹೇಳುತ್ತಿದ್ದಾರೆ ಎಂದು ಗುಡುಗಿದ್ದಾರೆ.

ಇದನ್ನೂ ಓದಿ: ಡಿ.ಕೆ ಶಿವಕುಮಾರ್ ಸಿಡಿ ಪ್ರಕರಣದಲ್ಲಿ ದುಡುಕಿ ತಮ್ಮ ಹೆಸರನ್ನು ತಾವೇ ಏಕೆ ಸಿಲುಕಿಸಿಕೊಂಡರು ಗೊತ್ತಿಲ್ಲ: ಹೆಚ್​.ಡಿ. ಕುಮಾರಸ್ವಾಮಿ 

ಜೆಡಿಎಸ್​​ನಿಂದ ಹೊರ ಹೋಗುವವರಿಗೆ ಬಾಗಿಲು ತೆರೆದಿದೆ: ಹೆಚ್​​.ಡಿ. ಕುಮಾರಸ್ವಾಮಿ

Follow Us
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೈ ಕೈ ಮಿಲಾಯಿಸುವ ಹಂತಕ್ಕೆ ಹೋದ ‘ಬಿಗ್ ಬಾಸ್ ಕನ್ನಡ 13’ ಶೋ ಸ್ಪರ್ಧಿಗಳು
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಕೊಪ್ಪಳದಲ್ಲಿ ಕೋತಿಯ ಚೇಷ್ಟೆಯಿಂದ ಪ್ರಾಣ ಕಳೆದುಕೊಂಡ 91 ವರ್ಷದ ಅಜ್ಜಿ!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
ಗುಜರಾತ್‌ನಲ್ಲಿ ಭಕ್ತರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹಚ್ಚಿದ ಜನರು!
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
‘ದಸರಾದಲ್ಲಿ ಕಂಬಳ ಆಯೋಜಿಸುವುದು ಬೇಡ’ ಎಂದ ಪ್ರಮೋದಾದೇವಿ ಒಡೆಯರ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಸ್ಯಾಂಡಲ್​ವುಡ್ ಮಯೂರ ಎಂಬ ಬಿರುದು ನೀಡಿದ್ದಕ್ಕೆ ಕಾರಣ ತಿಳಿಸಿದ ವಿಜಯ್
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಕಬ್ಬನ್ ಪಾರ್ಕ್​ಗೂ ಪ್ರವೇಶ ಶುಲ್ಕ?; ತೋಟಗಾರಿಕೆ ಇಲಾಖೆ ಚಿಂತನೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಆದೇಶ: ಪ್ರಿಯಾಂಕ್ ಖರ್ಗೆ ಮಹತ್ವದ ಹೇಳಿಕೆ
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮಾಂಗಲ್ಯ ಮಾರಿಯಾದ್ರೂ ದುಡ್ಡು ಕೊಡ್ತೀವಿ, ನೀರು ಕೊಡಿ: ಮಹಿಳೆಯರ ಅಳಲು
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಮನೆ ಕೆಲಸದ ಹೆಸರಿನಲ್ಲಿ 'ಕಾಳಿಕಾಂಬ ಎಂಟರ್‌ಪ್ರೈಸಸ್' ವಂಚನೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ
ಯಲ್ಲಮ್ಮನ ಗುಡ್ಡದ ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಔಷಧ ಮಾರಾಟ ಪತ್ತೆ