‘ಅವರನ್ನ ಮಂತ್ರಿ ಮಾಡಿಬಿಟ್ರೆ ಹೆದರಿಕೊಳ್ಳೋನಲ್ಲ ನಾನು.. ಚನ್ನಪಟ್ಟಣಕ್ಕೆ ನಾನೇ ಮಂತ್ರಿ – ನಾನೇ ಸರ್ಕಾರ’

ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ ಎಂದು ಜಿಲ್ಲೆಯ ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿಯಲ್ಲಿ ಯಾರನ್ನೋ ಮಂತ್ರಿ ಮಾಡಬೇಡಿ ಎಂದು ಹೇಳಿದ್ದೀನಂತೆ.

‘ಅವರನ್ನ ಮಂತ್ರಿ ಮಾಡಿಬಿಟ್ರೆ ಹೆದರಿಕೊಳ್ಳೋನಲ್ಲ ನಾನು.. ಚನ್ನಪಟ್ಟಣಕ್ಕೆ ನಾನೇ ಮಂತ್ರಿ - ನಾನೇ ಸರ್ಕಾರ’
H.D.ಕುಮಾರಸ್ವಾಮಿ
Follow us
KUSHAL V
| Updated By: ಸಾಧು ಶ್ರೀನಾಥ್​

Updated on: Nov 27, 2020 | 5:31 PM

ರಾಮನಗರ: ಚನ್ನಪಟ್ಟಣಕ್ಕೆ ನಾನೇ ಮಂತ್ರಿ, ನಾನೇ ಸರ್ಕಾರ ಎಂದು ಚನ್ನಪಟ್ಟಣದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ. ಬಿಜೆಪಿಯಲ್ಲಿ ಯಾರನ್ನೋ ಮಂತ್ರಿ ಮಾಡಬೇಡಿ ಎಂದು ಹೇಳಿದ್ದೀನಂತೆ. ಯಾರನ್ನೋ ಮಂತ್ರಿ ಮಾಡಿದ್ರೆ ನಾನು ಹೆದರಿಕೊಳ್ಳುವವನಲ್ಲ ಎಂದು ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಕ್ಷೇತ್ರ ಅಭಿವೃದ್ಧಿಗೆ ಹಣ ಬಿಡುಗಡೆ ವಿಚಾರವಾಗಿ ಸಿಎಂ ಭೇಟಿಯಾಗಿದ್ದೆನೇ ಹೊರತು ರಾಜಕೀಯವಾಗಿ ಯಾವುದೇ ವಿಚಾರವನ್ನು ಚರ್ಚೆ ಮಾಡಿಲ್ಲ. ಎಂತೆಂಥವರನ್ನ ನಾವು ನೋಡಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದರು.

ಇಲ್ಯಾರೋ ಮಂತ್ರಿಯಾದ್ರೆ ಹೆದರಿಕೊಂಡು ಹೋಗುತ್ತೀವಾ? ಅವರು 20 ಕೆರೆ ತುಂಬಿಸಿರೋದಕ್ಕೆ ಭಗೀರಥ ಆಗಿಬಿಟ್ಟರಂತೆ. ನಾನು 128 ಕೆರೆ ತುಂಬಿಸಿದ್ದೇನೆ, ಪ್ರಾಮಾಣಿಕ ಕೆಲಸ ಮಾಡಿದ್ದೇನೆ. ಜಿಲ್ಲೆಯಲ್ಲಿ ಬಡವರಿಗೆ ಅನ್ಯಾಯ ಹಾಗೂ ಅಕ್ರಮ ಚಟುವಟಿಕೆ ನಡೆಯಲು ನಾನು ಅವಕಾಶ ಮಾಡಿಕೊಡುವುದಿಲ್ಲ. ಸಿಎಂ ನಮ್ಮ ಜಿಲ್ಲೆಯ ನಾಲ್ಕು ಜನರನ್ನ ಮಂತ್ರಿ ಮಾಡಲಿ ಎಂದು ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಹೇಳಿದರು.

‘ಸ್ವಾರ್ಥಕ್ಕಾಗಿ ವಿವಾದದ ವಿಚಾರಕ್ಕೆ ನಾನು ತಲೆ ಹಾಕುವುದಿಲ್ಲ’ ಲಿಂಗಾಯತ ಸಮುದಾಯವನ್ನ ಒಬಿಸಿಗೆ ಸೇರಿಸುವ ವಿಚಾರವಾಗಿ ಈಗಿನ ರಾಜಕೀಯ ಪ್ರಸಂಗಗಳ ಬಗ್ಗೆ ಚರ್ಚೆ ಮಾಡುವುದಿಲ್ಲ. ಮೀಸಲಾತಿ, ಪ್ರಾಧಿಕಾರ ರಚನೆ ಮಾಡುವುದು ಅವರವರ ಇಚ್ಛೆ. ಅಧಿಕಾರ ನಡೆಸುವವರಿಗೆ ನಾನು ಸಲಹೆ ಕೊಡುತ್ತೇನೆ. ಪ್ರತಿ ಕುಟುಂಬಕ್ಕೂ ವಸತಿ, ಶಿಕ್ಷಣ, ಆರೋಗ್ಯ ಕಲ್ಪಿಸಬೇಕು. ಉದ್ಯೋಗ ಕಲ್ಪಿಸುವುದು ಸರ್ಕಾರದ ಕೆಲಸ ಎಂದು ಕುಮಾರಸ್ವಾಮಿ ಹೇಳಿದರು.

ಸ್ವಾರ್ಥಕ್ಕಾಗಿ ವಿವಾದದ ವಿಚಾರಕ್ಕೆ ನಾನು ತಲೆ ಹಾಕುವುದಿಲ್ಲ. ಫಲಾಪೇಕ್ಷೆ ಇಟ್ಟುಕೊಂಡು ನಾನು ತಲೆ ಹಾಕುವುದಿಲ್ಲ ಎಂದು ಚನ್ನಪಟ್ಟಣದಲ್ಲಿ ಕುಮಾರಸ್ವಾಮಿ ಹೇಳಿದರು.

ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಶತಕ ಪೂರೈಸುತ್ತಿದ್ದಂತೆ ಕಣ್ಣೀರಿಟ್ಟ ನಿತೀಶ್ ಕುಮಾರ್ ರೆಡ್ಡಿ ಅವರ ತಂದೆ..!
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅಂತಿಮಯಾತ್ರೆ ನೇರಪ್ರಸಾರ
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಆಸ್ಟ್ರೇಲಿಯನ್ನರ ಮುಂದೆ ಪುಷ್ಪ ಸ್ಟೈಲ್​ನಲ್ಲಿ ಸಂಭ್ರಮಿಸಿದ ನಿತೀಶ್ ಕುಮಾರ್
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಎಂಟು ಮಂದಿ ನಾಮಿನೇಟ್; ಈ ಸ್ಪರ್ಧಿ ಮನೆಯಿಂದ ಔಟ್ ಆಗೋದು ಪಕ್ಕಾ?
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
ಕೊಹ್ಲಿ ಔಟಾದಾಗ ಸ್ಯಾಮ್​ ಕೊನ್​ಸ್ಟಾಸ್ ಸಂಭ್ರಮಿಸಿದ್ದು ಹೇಗೆ ನೋಡಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ
Daily Devotional: ದೇವರ ನಾಮ ಜಪದ ಮಹತ್ವ ಮತ್ತು ಪ್ರಯೋಜನಗಳು ತಿಳಿಯಿರಿ