
ಬೆಂಗಳೂರು: ಇಂದು ಪ್ರಧಾನಿ ನರೇಂದ್ರ ಮೋದಿಗೆ 70ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಈ ವೇಳೆ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್‌ಡಿ ಕುಮಾರಸ್ವಾಮಿ ಪ್ರಧಾನಿಗೆ ಶುಭಾಶಯ ಕೋರಿದ್ದಾರೆ. ಜೊತೆಗೆ ಕೇಂದ್ರ ಸರ್ಕಾರದ ವೈಫಲ್ಯಗಳತ್ತ ಬೊಟ್ಟುಮಾಡಿ, ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಮ್ಮ ದೇಶದಲ್ಲಿ ನಿರುದ್ಯೋಗ ಸಮಸ್ಯೆ ತಾಂಡವವಾಡುತ್ತಿದೆ. 20 ಕೋಟಿ ಜನ ಉದ್ಯೋಗವಿಲ್ಲದೆ ಬೀದಿಯಲ್ಲಿ ಬಿದ್ದಿದ್ದಾರೆ. ಆದರೆ ಯಾರೂ ಕೇಳುವವರಿಲ್ಲವೆಂದು HDK ಬೇಸರ ವ್ಯಕ್ತಪಡಿಸಿದ್ದಾರೆ. ದೇಶಕ್ಕೆ ಬಂದ ಆಪತ್ತು ನಿವಾರಿಸುವಲ್ಲಿ ಈಗಲಾದರೂ ಶ್ರಮಿಸಿ. ಪ್ರಧಾನಿ ನರೇಂದ್ರ ಮೋದಿ ಈಗಲಾದರೂ ಕೆಲಸ ಮಾಡಲಿ ಎಂದು ಬೆಂಗಳೂರಿನಲ್ಲಿ ಮಾಜಿ ಸಿಎಂ H.D. ಕುಮಾರಸ್ವಾಮಿ ಹೇಳಿದ್ರು.