ಸೋಂಕಿನ ವಿರುದ್ಧ 1 ತಿಂಗಳ ಸತತ ಹೋರಾಟ: ಮುಖ್ಯಪೇದೆ ಕೊನೆಯುಸಿರು
ಕೋಲಾರ: ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ವಾರಿಯರ್ ಒಬ್ಬರು ಇಂದು ಬಲಿಯಾಗಿದ್ದಾರೆ. ಜಿಲ್ಲೆಯ ಮಾಲೂರು ಠಾಣೆಯ ಮುಖ್ಯಪೇದೆ N.C.ನಾರಾಯಣಸ್ವಾಮಿ ಸೋಂಕಿನಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ. ಸತತ 1 ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣಸ್ವಾಮಿ ಒಂದು ತಿಂಗಳಿನಿಂದ ಕೊರೊನಾ ಸೋಂಕು ತಗುಲಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ […]

ಕೋಲಾರ: ಸೋಂಕಿನ ವಿರುದ್ಧದ ಸಮರದಲ್ಲಿ ಜಿಲ್ಲೆಯ ವಾರಿಯರ್ ಒಬ್ಬರು ಇಂದು ಬಲಿಯಾಗಿದ್ದಾರೆ. ಜಿಲ್ಲೆಯ ಮಾಲೂರು ಠಾಣೆಯ ಮುಖ್ಯಪೇದೆ N.C.ನಾರಾಯಣಸ್ವಾಮಿ ಸೋಂಕಿನಿಂದಾಗಿ ಇಂದು ಕೊನೆಯುಸಿರೆಳೆದಿದ್ದಾರೆ. ಸತತ 1 ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ನಾರಾಯಣಸ್ವಾಮಿ ಒಂದು ತಿಂಗಳಿನಿಂದ ಕೊರೊನಾ ಸೋಂಕು ತಗುಲಿಸಿಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಾರಾಯಣಸ್ವಾಮಿ ಇಂದು ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದ್ದಾರೆ.