ಸಚಿವ ರಾಮುಲು ತಾಯಿ ಹೊನ್ನೂರಮ್ಮ ರಾತ್ರಿ ವಿಧಿವಶ, ಬೆಳಗಿನ ಜಾವ ಅಂತ್ಯಸಂಸ್ಕಾರ
ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ತಾಯಿ ಹೊನ್ನೂರಮ್ಮ(95) ನಿನ್ನೆ ರಾತ್ರಿ 11:50 ಕ್ಕೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಹೊನ್ನೂರಮ್ಮ ಇತ್ತೀಚೆಗಷ್ಟೇ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸಂಪೂರ್ಣ ಗುಣಮುಖರಾಗಿ ನಿನ್ನೆ ಅಂದರೆ ಗುರುವಾರವಷ್ಟೇ ಡಿಸ್ಚಾರ್ಜ್ ಆಗಿ ಬಳ್ಳಾರಿಯ ಮನೆಗೆ ಮರಳಿದ್ದರು. ನಿನ್ನೆ ರಾತ್ರಿ, ಬಳ್ಳಾರಿಯಲ್ಲಿ ವಯೋಸಹಜ ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಹೊನ್ನೂರಮ್ಮನವರನ್ನು ದಾಖಲಿಸಲಾಗಿತ್ತು. ಆದರೆ […]

ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ತಾಯಿ ಹೊನ್ನೂರಮ್ಮ(95) ನಿನ್ನೆ ರಾತ್ರಿ 11:50 ಕ್ಕೆ ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಹೊನ್ನೂರಮ್ಮ ಇತ್ತೀಚೆಗಷ್ಟೇ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದರು. ಹೀಗಾಗಿ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಸಂಪೂರ್ಣ ಗುಣಮುಖರಾಗಿ ನಿನ್ನೆ ಅಂದರೆ ಗುರುವಾರವಷ್ಟೇ ಡಿಸ್ಚಾರ್ಜ್ ಆಗಿ ಬಳ್ಳಾರಿಯ ಮನೆಗೆ ಮರಳಿದ್ದರು.
ನಿನ್ನೆ ರಾತ್ರಿ, ಬಳ್ಳಾರಿಯಲ್ಲಿ ವಯೋಸಹಜ ಕಾರಣದಿಂದ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ಹೊನ್ನೂರಮ್ಮನವರನ್ನು ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ರಾತ್ರಿ 11:50 ಕ್ಕೆ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ 5:30 ಕ್ಕೆ ಅಂತ್ಯ ಸಂಸ್ಕಾರ ನೆರವೇರಿದೆ.
ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ನಿನ್ನೆ ತಡ ರಾತ್ರಿ ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ.
ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು. pic.twitter.com/D94Lzg5Do6
— B Sriramulu (@sriramulubjp) August 21, 2020
Published On - 8:55 am, Fri, 21 August 20




