ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಬೆನ್ನಲ್ಲೇ ತಾಲೂಕಾಸ್ಪತ್ರೆ ಆರೋಗ್ಯ ಸಚಿವರ ದಿಢೀರ್ ಭೇಟಿ

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ  ನಡೆಸಿದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿಯ ಹಾಜರಾತಿಯನ್ನೂ ಸಚಿವರು ಪರಿಶೀಲಿಸಿದರು. 3ದಿನದ ಹಿಂದೆ ತಾವು ಪ್ರತಿನಿಧಿಸುವ ಕ್ಷೇತ್ರದ ತಾಲೂಕಾಸ್ಪತ್ರೆ ಅವ್ಯವಸ್ಥೆ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಶ್ರೀರಾಮುಲು ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಕರ್ತವ್ಯ ಪಾಲಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ನಿಯಮ ಮೀರಿದ್ರೆ […]

ಅವ್ಯವಸ್ಥೆ ವಿರುದ್ಧ ಪ್ರತಿಭಟನೆ ಬೆನ್ನಲ್ಲೇ ತಾಲೂಕಾಸ್ಪತ್ರೆ ಆರೋಗ್ಯ ಸಚಿವರ ದಿಢೀರ್ ಭೇಟಿ
Follow us
ಸಾಧು ಶ್ರೀನಾಥ್​
|

Updated on: Jan 07, 2020 | 3:42 PM

ಚಿತ್ರದುರ್ಗ: ಮೊಳಕಾಲ್ಮೂರು ಪಟ್ಟಣದಲ್ಲಿರುವ ತಾಲೂಕು ಆಸ್ಪತ್ರೆಗೆ ಆರೋಗ್ಯ ಸಚಿವ ಶ್ರೀರಾಮುಲು ದಿಢೀರ್ ಭೇಟಿ ನೀಡಿದ್ದಾರೆ. ಆಸ್ಪತ್ರೆಗೆ ದಾಖಲಾದ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯದ ಬಗ್ಗೆ ವಿಚಾರಣೆ  ನಡೆಸಿದರು. ಈ ವೇಳೆ ಆಸ್ಪತ್ರೆ ಸಿಬ್ಬಂದಿಯ ಹಾಜರಾತಿಯನ್ನೂ ಸಚಿವರು ಪರಿಶೀಲಿಸಿದರು.

3ದಿನದ ಹಿಂದೆ ತಾವು ಪ್ರತಿನಿಧಿಸುವ ಕ್ಷೇತ್ರದ ತಾಲೂಕಾಸ್ಪತ್ರೆ ಅವ್ಯವಸ್ಥೆ ಬಗ್ಗೆ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು. ಹೀಗಾಗಿ ಇಂದು ಶ್ರೀರಾಮುಲು ತಾಲೂಕಾಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ನೀಡಿ ಕರ್ತವ್ಯ ಪಾಲಿಸುವಂತೆ ವೈದ್ಯಾಧಿಕಾರಿಗಳಿಗೆ ಸೂಚಿಸಿದರು. ನಿಯಮ ಮೀರಿದ್ರೆ ಕಾನೂನು ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಆಸ್ಪತ್ರೆ ವ್ಯವಸ್ಥೆ ಸುಧಾರಣೆಗೆ ಆಗ್ರಹಿಸಿ ಸ್ಥಳೀಯ ಯುವಕರು ಸಚಿವ ಶ್ರೀರಾಮುಲುಗೆ ಮನವಿ ಪತ್ರ ನೀಡಿದ್ರು.